

ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಆರಂಭವಾಗಿದೆ. ಕರೊನಾ ಹರಡದಂತೆ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಆತಂಕವಿಲ್ಲದೆ ಪರೀಕ್ಷೆ ಬರೆಯಬಹುದು. ಎಂ.ಎಚ್. ಗಂಗಮಾರೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬೆಂ.ಗ್ರಾಮಾಂತರ ಪರೀಕ್ಷಾ ಅವಧಿಯಲ್ಲಿ ವಸತಿ ಸೌಕರ್ಯವಿಲ್ಲದ ವಿದ್ಯಾರ್ಥಿಗಳಿಗಾಗಿ ಹತ್ತಿರವಿರುವ ಸಮಾಜ ಕಲ್ಯಾಣ ಇಲಾಖೆ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ಶಾಲೆಗಳಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಇರಲಿದೆ. ವಿದ್ಯಾರ್ಥಿ ಪಾಲಕರು ಈ ಬಗ್ಗೆ ಮೊದಲೇ ಸಂಬಂಧಪಟ್ಟವರಿಗೆ ಮಾಹಿತಿ ನೀಡಬೇಕು. ಕನ್ನಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಹೊಸಕೋಟೆ