More

    ಕೆಂಪೇಗೌಡರ ಸಮಾಧಿಗೆ ಕಾಯಕಲ್ಪ; ವಿಮಾನ ನಿಲ್ದಾಣದಲ್ಲಿ ಪ್ರತಿಮೆ

    ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮಹಾ ಸಮಾಧಿ ಇರುವ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮವನ್ನು ವಿಶ್ವದರ್ಜೆಯ ಪ್ರವಾಸಿತಾಣವನ್ನಾಗಿ ಅಭಿವೃದ್ಧಿಪಡಿಸಲು 35 ಕೋಟಿ ರೂ. ವೆಚ್ಚದ ಯೋಜನೆ ಸಿದ್ಧವಾಗಿದೆ. ಶುಕ್ರವಾರ ಕೆಂಪಾಪುರ ಗ್ರಾಮಕ್ಕೆ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

    ಕೆಂಪಾಪುರವನ್ನು ಅಭಿವೃದ್ಧಿಪಡಿಸಿ ಕೆಂಪೇಗೌಡರ ಸಾಧನೆಗಳನ್ನು ಮುಂದಿನ ತಲೆಮಾರುಗಳಿಗೂ ತಿಳಿಯುವಂತೆ ಮಾಡಬೇಕಾಗಿದೆ. ಈ ಯೋಜನೆಗೆ ಎಂಟು ಎಕರೆ ಭೂಮಿಯ ಅಗತ್ಯವಿದ್ದು, ಭೂಮಿ ಸಿಕ್ಕ ತಕ್ಷಣ ಕಾಮಗಾರಿ ಪ್ರಾರಂಭ ಮಾಡಲಾಗುವುದು ಎಂದು ಹೇಳಿದರು.

    ಇದನ್ನೂ ಓದಿರಿ ರಾತ್ರೋರಾತ್ರಿ ಕಾರ್ಮಿಕರನ್ನು ಕರೆತಂದು ಅವ್ಯವಸ್ಥೆ ಕೂಪಕ್ಕೆ ದೂಡಿದ್ರು!

    ಸಮಾಧಿ ಸ್ಥಳ, ಕೆಂಪಾಪುರ ಕೆರೆ ಸೇರಿ ಇಡೀ ಗ್ರಾಮವನ್ನು ಅಭಿವೃದ್ಧಿ ಮಾಡುವ ಬಗ್ಗೆ ಈಗಾಗಲೇ ಸಿಡಾಕ್ ಸಂಸ್ಥೆ ಸಮಗ್ರ ಯೋಜನಾ ವರದಿ ನೀಡಿದೆ. ಜೂನ್ 27ರಂದು ಕೆಂಪೇಗೌಡರ ಜಯಂತಿ ಇದ್ದು, ಆ ದಿನವೇ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.

    ಇದಲ್ಲದೆ ಬೆಂಗಳೂರು ವಿಮಾನ ನಿಲ್ದಾಣದ ಮುಂದೆ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಸ್ಥಾಪನೆ ಮಾಡುವ 66 ಕೋಟಿ ರೂ. ವೆಚ್ಚದ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ವಿಧಾನಸೌಧ ಬಳಿ ಸ್ಥಾಪನೆಯಾಗಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ತಯಾರಿಸಿದ ರಾಮಸುತ ಅವರೇ ಈ ಪ್ರತಿಮೆಯನ್ನು ಮಾಡುತ್ತಿದ್ದಾರೆ. ಯೋಜನೆಗೆ ಕೆಂಪೇಗೌಡರ ಜಯಂತಿ ದಿನವೇ ಶಂಕುಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ ಎಂದರು.

    ಇದನ್ನೂ ಓದಿರಿ VIDEO: 107 ಜನರಿದ್ದ ಪಾಕಿಸ್ತಾನದ ವಿಮಾನ ಪತನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts