More

    ಜಾತಿ ಪ್ರಮಾಣಪತ್ರಕ್ಕಾಗಿ ಅಲೆದಾಟ

    ರೋಣ: ತಾಲೂಕಿನ 24 ಗ್ರಾಮ ಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ಸ್ಪರ್ಧೆಗಿಳಿಯುವ ಹುಮ್ಮಸ್ಸಿನಲ್ಲಿರುವ ಆಕಾಂಕ್ಷಿಗಳು ಜಾತಿ ಪ್ರಮಾಣಪತ್ರಕ್ಕಾಗಿ ತಹಸೀಲ್ದಾರ್ ಕಚೇರಿಗೆ ಮುಗಿಬಿದ್ದಿದ್ದಾರೆ.

    ಗ್ರಾಪಂ ಚುನಾವಣೆ ಘೊಷಣೆಯಾದಾಗಿನಿಂದಲೂ ಪ್ರಮಾಣ ಪತ್ರಗಳಿಗಾಗಿ ತಹಸೀಲ್ದಾರ್ ಕಚೇರಿಗೆ ಬರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಳ್ಳಿಗಳಿಂದ ತಂಡೋಪತಂಡವಾಗಿ ಬರುವ ಜನ ಇಡೀ ದಿನ ಕಚೇರಿಯ ಮುಂದೆ ಕಾದು ಕುಳಿತುಕೊಳ್ಳುವುದು ಸಾಮಾನ್ಯವಾಗಿದೆ. ತಹಸೀಲ್ದಾರ್ ಕಚೇರಿಯ ಸಿಬ್ಬಂದಿ ಕೂಡ ಚುನಾವಣೆ ಘೊಷಣೆಯಾದಾಗಿನಿಂದ ಪ್ರತಿ ದಿನ ಸಂಜೆ 7 ಗಂಟೆಯವರೆಗೆ ಕೆಲಸ ಮಾಡುತ್ತಿದ್ದಾರೆ.

    ತಾಲೂಕಿನಲ್ಲಿ 123 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 53 ಸೂಕ್ಷ್ಮ, 15 ಅತಿ ಸೂಕ್ಷ್ಮ, 55 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಡಿ. 11ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು ಡಿ. 16ರಂದು ಕೊನೆಯ ದಿನವಾಗಿದೆ. ಡಿ 17 ನಾಮಪತ್ರಗಳ ಪರಿಶೀಲನೆ, ಡಿ. 19 ಉಮೇದುವಾರಿಕೆ ಹಿಂತೆಗೆಕೊಳ್ಳಲು ಕೊನೆಯ ದಿನ, ಡಿ. 27 ಮತದಾನ, ಡಿ. 30 ಮತಗಳ ಎಣಿಕೆ ನಡೆಯಲಿದೆ.

    ಗ್ರಾಪಂ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಿಗಲಿಲ್ಲ ಎನ್ನುವ ಕಾರಣಕ್ಕೆ ಸ್ಪರ್ಧೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಅಭ್ಯರ್ಥಿಗಳಿಗೆ ಬೇಕಾಗುವ ಜಾತಿ ಪ್ರಮಾಣ ಪತ್ರ ನೀಡಲು ಕಚೇರಿಯಲ್ಲಿ ಹೆಚ್ಚಿನ ಸಿಬ್ಬಂದಿ ನಿಯುಕ್ತಿಗೊಳಿಸಿ ಪ್ರತಿ ದಿನ ಸಂಜೆ 7 ಗಂಟೆಯವರೆಗೂ ಕಾರ್ಯ ನಿರ್ವಹಿಸಲಾಗುತ್ತಿದೆ.
    | ಜೆ.ಬಿ. ಜಕ್ಕನಗೌಡ್ರ, ತಹಸೀಲ್ದಾರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts