More

    ಭಾರತೀಯ ಭಾಷೆಗಳ ಉಳಿವಿಗೆ ಪ್ರಯತ್ನ ಅಗತ್ಯ

    ಧಾರವಾಡ: ಕರ್ನಾಟಕ ಮತ್ತು ಕನ್ನಡವನ್ನು ಅರ್ಥ ಮಾಡಿಕೊಳ್ಳುವ ಬಗೆ ಬದಲಾಗಬೇಕು. ಇದರಿಂದ ಕನ್ನಡ ಭಾಷೆ, ಸಂಸ್ಕೃತಿಯನ್ನು ಉಳಿಸಲು ಸಾಧ್ಯ. ಭಾರತೀಯ ಭಾಷೆಗಳು ಆತಂಕದಲ್ಲಿವೆ. ಆದ್ದರಿಂದ ಭಾಷೆಗಳ ಉಳಿವಿಗೆ ನಾವೆಲ್ಲರೂ ಮುಂದಾಗಬೇಕು ಎಂದು ನವದೆಹಲಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.
    ನಗರದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕವಿವಿ ಕೊಡಮಾಡುವ ‘ಅರಿವೇ ಗುರು’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
    ಕರ್ನಾಟಕದ ಮಣ್ಣಿನ ಸಂಸ್ಕೃತಿಯು ವಿವಿಧತೆಯಿಂದ ಕೊಡಿದೆ. ಇದರ ಇತಿಹಾಸವನ್ನು ಇಂದಿನ ವಿದ್ಯಾರ್ಥಿಗಳು ಸರಿಯಾಗಿ ಅರ್ಥೈಸಿಕೊಳ್ಳಬೇಕಾಗಿದೆ. ಜಾಗತಿಕ ಮಟ್ಟದಲ್ಲಿ ಕನ್ನಡವನ್ನು ಬೆಳಸುವ ಅವಶ್ಯಕತೆ ಇದೆ ಎಂದರು.
    ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ವಿರಣ್ಣ ರಾಜೂರ ಮಾತನಾಡಿ, ಸಮಾನತೆಯ ಸಮಾಜ ನಿರ್ಮಾಣ ಮಾಡುವುದು ಇಂದಿನ ಅಗತ್ಯ. ಅರಿವೇ ಗುರು ಪ್ರಶಸ್ತಿ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದು.
    ಇನ್ನೋರ್ವ ಪ್ರಶಸ್ತಿ ಪುರಸ್ಕೃತರಾದ ಖಗೋಳ ವಿಜ್ಞಾನಿ ಪ್ರೊ. ಅಜಿತ ಕೇಶವ ಕೆಂಬಾವಿ ಮತ್ತು ಪ್ರೊ. ಆರ್.ಜಿ. ಅಕ್ಕಿಹಾಳ ಅನುಭವ ಹಂಚಿಕೊಂಡರು.
    ಕವಿವಿ ಕುಲಪತಿ ಪ್ರೊ. ಕೆ.ಬಿ. ಗುಡಸಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಕುಲಸಚಿವೆ ಪ್ರೊ. ಚಂದ್ರಮಾ ಎಂ., ಮೌಲ್ಯಮಾಪನ ಕುಲಸಚಿವ ಪ್ರೊ. ನಿಜಲಿಂಗಪ್ಪ ಮಟ್ಟಿಹಾಳ,  ಪ್ರಸಾರಾಂಗ ನಿರ್ದೇಶಕ ಡಾ. ಚಂದ್ರಶೇಖರ ರೊಟ್ಟಿಗವಾಡ, ಡಾ. ನಿಂಗಪ್ಪ ಮುದೇನೂರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts