VIDEO| ಡಾ. ಬಾಬಾ ಸಾಹೇಬ್​ ಅಂಬೇಡ್ಕರ್​ ಅವರ 128ನೇ ಜಯಂತಿ: ಸಂವಿಧಾನ ಶಿಲ್ಪಿಗೆ ರಾಷ್ಟ್ರಪತಿ, ಪ್ರಧಾನಿ ನಮನ

ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್​ ಅಂಬೇಡ್ಕರ್​ ಅವರ 128ನೇ ಜಯಂತಿಯನ್ನು ದೇಶಾದ್ಯಂತ ಭಾನುವಾರ ಆಚರಿಸಲಾಯಿತು. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಟ್ವೀಟ್​ ಮಾಡುವ ಮೂಲಕ ಸಂವಿಧಾನ ಶಿಲ್ಪಿಯನ್ನು ಸ್ಮರಿಸಿದರು.

ಅಂಬೇಡ್ಕರ್​ ಅವರು ಅಪ್ರತಿಮ ದೇಶ ಭಕ್ತರಾಗಿದ್ದರು. ಜಾತಿ ಮತ್ತಿತರ ಮೌಢ್ಯಗಳ ವಿರೋಧಿ ನಿಲುವು ಹೊಂದಿದ್ದ ಅವರು, ಜಾತ್ಯತೀತ ರಾಷ್ಟ್ರದ ಪರಿಕಲ್ಪನೆ ಹೊಂದಿ ಅಂತ ವ್ಯವಸ್ಥೆಯನ್ನು ಜಾರಿಗೊಳಿಸಲು ಹೋರಾಡಿದವರು. ಮಹಿಳೆಯರು ಮತ್ತು ದುರ್ಬಲ ವರ್ಗದವರಿಗೆ ಸಮಾನ ಹಕ್ಕು ದೊರೆಯುವಂತೆ ಮಾಡುವುದು ಅವರ ಕನಸಾಗಿತ್ತು ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ ತಮ್ಮ ಟ್ವೀಟ್​ನಲ್ಲಿ ಹೇಳಿದ್ದಾರೆ.

ಸಾಮಾಜಿಕ ನ್ಯಾಯದ ಪರವಾಗಿ ಒಲವು ಹೊಂದಿದ್ದ ಸಂವಿಧಾನ ಶಿಲ್ಪಿ ಅವರಿಗೆ ನಮನಗಳು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ  ಟ್ವೀಟ್​ನಲ್ಲಿ ಹೇಳಿದ್ದಾರೆ. (ಏಜೆನ್ಸೀಸ್​)