More

    ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಮಾತುಕತೆ

    ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯುವ ಸಲುವಾಗಿ ಇಂದು ಕರ್ನಾಟಕಕಕ್ಕೆ ಆಗಮಿಸಿದ್ದು, ಇದೀಗ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರ ಮನೆಯತ್ತ ಹೊರಟಿದ್ದಾರೆ.

    ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ದ್ರೌಪದಿ ಮುರ್ಮು ಅವರು ಭೇಟಿಯಾಗಲಿದ್ದು, ಅಲ್ಲಿ ದೇವೇಗೌಡರ ಬೆಂಬಲಕ್ಕಾಗಿ ಮನವಿ ಮಾಡಿಕೊಳ್ಳಲಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಿಂದ ಹೊರಡ ದ್ರೌಪದಿ ಮುರ್ಮು ಅವರ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ದೇವೇಗೌಡರ ಮನೆಗೆ ಹೊರಟಿದ್ದಾರೆ.

    ಇಂದು ಕರ್ನಾಟಕ್ಕೆ ಆಗಮಿಸಿದ್ದ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಾಭಿವೃದ್ಧಿ ಸಚಿವ ಬಸವರಾಜ್ ಬೈರತಿ ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರಪತಿ ಸ್ಥಾನಕ್ಕೆ ಇದೇ 18 ರಂದು ಚುನಾವಣೆ ನಡೆಯಲಿದೆ.

    ಫುಡ್​ ಡೆಲಿವರಿ ಬಾಯ್ ಆಗಿ ಮನೆ ಮನೆಗೂ ತೆರಳಿದ ನಾಯಕ ನಟ!

    ಕನ್ಹಯ್ಯ ಲಾಲ್​ ಕೊಲೆ ಪ್ರಕರಣ; ಇನ್ನೊಬ್ಬ ಆರೋಪಿಯ ಬಂಧನ..

    ವಿಶಾಲ ಗಾಣಿಗ ಕೊಲೆ ಪ್ರಕರಣ: ಇನ್ನೊಬ್ಬ ಸುಪಾರಿ ಕಿಲ್ಲರ್ ಬಂಧನ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts