ಸೇನಾ ಆಸ್ಪತ್ರೆಗೆ 20 ಲಕ್ಷ ರೂ. ದೇಣಿಗೆ ನೀಡಿದ ರಾಷ್ಟ್ರಪತಿ ರಾಮನಾಥ ಕೋವಿಂದ...

President
Published on

ನವದೆಹಲಿ: ಇಂದು ಕಾರ್ಗಿಲ್ ವಿಜಯ ದಿವಸ್. ಕಾರ್ಗಿಲ್​ ಯುದ್ಧದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಹುತಾತ್ಮ ಯೋಧರಿಗೆ ದೇಶಾದ್ಯಂತ ಗೌರವ ಸಲ್ಲಿಸಲಾಗಿದೆ. ರಾಜಕೀಯ ಪ್ರಮುಖರೂ ಸಹ ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ.

ಅಂತೆಯೇ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅವರು ಕಾರ್ಗಿಲ್​ ವಿಜಯ್​ ದಿವಸ್​ ಅಂಗವಾಗಿ, ದೆಹಲಿಯಲ್ಲಿರುವ ಸೇನಾ ಆಸ್ಪತ್ರೆಗೆ 20 ಲಕ್ಷ ರೂ.ದೇಣಿಗೆ ನೀಡುವ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ್ದಾರೆ. ಇಂದು ಚೆಕ್​​ನ್ನು ಹಸ್ತಾಂತರ ಮಾಡಿದ್ದಾರೆ.

ರಾಷ್ಟ್ರಪತಿಯವರು ನೀಡಿದ ಹಣವನ್ನು ಸೇನಾ ಆಸ್ಪತ್ರೆಯಲ್ಲಿ ಕೊವಿಡ್​-19 ಚಿಕಿತ್ಸೆಗಾಗಿ ಬಳಸುವ ಉಪಕರಣ ಮತ್ತು ಔಷಧಿಗೆ ಬಳಕೆ ಮಾಡಲಾಗುತ್ತದೆ. ಈ ಹಣದಲ್ಲಿ ಪವರ್ಡ್‌ ಏರ್‌ ಪ್ಯೂರಿಫೈಯಿಂಗ್‌ ರೆಸ್ಪಿರೇಟರ್‌ಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net