More

    ಎಲ್.ಕೆ. ಅಡ್ವಾಣಿ, ನರಸಿಂಹರಾವ್ ಸೇರಿ ಹಲವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಭಾರತದ ಇಬ್ಬರು ಮಾಜಿ ಪ್ರಧಾನಿಗಳಾದ ಪಿವಿ ನರಸಿಂಹರಾವ್ ಮತ್ತು ಚೌಧರಿ ಚರಣ್ ಸಿಂಗ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಇವರೊಂದಿಗೆ ಭಾರತದಲ್ಲಿ ಹಸಿರು ಕ್ರಾಂತಿಯ ಪಿತಾಮಹ ಎಂದು ಕರೆಯಲ್ಪಡುವ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೂ ಮರಣೋತ್ತರವಾಗಿ ಭಾರತ ರತ್ನ ನೀಡಲಾಯಿತು. ಜೊತೆಗೆ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಗೆ ಇಂದು ಭಾರತ ರತ್ನ ಪ್ರದಾನ ಮಾಡಲಾಯಿತು.

    ಪ್ರಶಸ್ತಿ ಸ್ವೀಕರಿಸಿದ ಕುಟುಂಬದ ಸದಸ್ಯರು
    ಭಾರತ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ರಾಷ್ಟ್ರಪತಿ ಭವನದಲ್ಲಿ ನಡೆಯಿತು. ಪ್ರಶಸ್ತಿಗಳನ್ನು ಅವರ ಕುಟುಂಬದ ಸದಸ್ಯರು ಸ್ವೀಕರಿಸಿದರು. ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಪುತ್ರ ಪಿ.ವಿ.ಪ್ರಭಾಕರ ರಾವ್ ಅವರು ರಾಷ್ಟ್ರಪತಿಗಳಿಂದ ತಮ್ಮ ತಂದೆಗೆ ನೀಡಿದ ಪ್ರಶಸ್ತಿಯನ್ನು ಸ್ವೀಕರಿಸಿದರು.

    ಇದೇ ಸಮಯದಲ್ಲಿ, ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ ಮತ್ತು ರಾಷ್ಟ್ರೀಯ ಲೋಕದಳ (RLD) ಅಧ್ಯಕ್ಷ ಜಯಂತ್ ಚೌಧರಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಸ್ವಾಮಿನಾಥನ್ ಅವರ ಪುತ್ರಿ ನಿತ್ಯಾ ರಾವ್ ಮತ್ತು ಕರ್ಪೂರಿ ಠಾಕೂರ್ ಅವರ ಪುತ್ರ ರಾಮನಾಥ್ ಠಾಕೂರ್ ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು.

    ಸಮಾರಂಭದಲ್ಲಿ ಉಪಾಧ್ಯಕ್ಷ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

    ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ಐವರಿಗೆ ಭಾರತ ರತ್ನ ಪ್ರಶಸ್ತಿಗಳನ್ನು ಈ ವರ್ಷ ಸರ್ಕಾರ ಘೋಷಿಸಿತ್ತು.  

    ಮತ್ತೆ ಸಾಮರ್ಥ್ಯ ಸಾಬೀತುಪಡಿಸಿದ ಭಾರತೀಯ ನೌಕಾಪಡೆ; ಕಡಲ್ಗಳ್ಳರ ಕಪಿಮುಷ್ಠಿಯಿಂದ 23 ಪಾಕ್ ಪ್ರಜೆಗಳ ರಕ್ಷಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts