ಸಾಧನೆಯಿಂದ ಸನ್ಮಾನ, ಪುರಸ್ಕಾರವಿಜಯವಾಣಿ ಸುದ್ದಿಜಾಲ ಕೆ.ಆರ್.ನಗರ
ವಿದ್ಯಾರ್ಥಿಗಳು ಪರಿಶ್ರಮದಿಂದ ವ್ಯಾಸಂಗ ಮಾಡಿ ಸಾಧನೆ ಮಾಡಿದರೆ ಪುರಸ್ಕಾರ, ಸನ್ಮಾನಗಳು ಹುಡುಕಿಕೊಂಡು ಬರುತ್ತವೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್. ಯದು ಗಿರೀಶ್ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತರಾದ ಸಂಘದ ಅಧ್ಯಕ್ಷ ಉದಯಕುಮಾರ್ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ತಾಲೂಕಿನಲ್ಲಿ ಶಿಕ್ಷಕರು ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವುದರಿಂದ ದಾಖಲೆಯ ಫಲಿತಾಂಶ ಬರುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ನೌಕರರ ಸಂಘವು ಶಿಕ್ಷಕರ ಜತೆ ಕೈಜೋಡಿಸಿ ಇನ್ನಷ್ಟು ಫಲಿತಾಂಶ ಹೆಚ್ಚಳಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಬಿ. ಅರುಣ್‌ಕುಮಾರ್, ಬಿಆರ್‌ಸಿ ರುದ್ರಪ್ಪ, ಅಕ್ಷರ ದಾಸೋಹದ ತಾಲೂಕು ನಿರ್ದೇಶಕ ಎಸ್. ಪ್ರದೀಪ್ ಕುಮಾರ್ ಮಾತನಾಡಿದರು.
ನಿವೃತ್ತ ಶಿಕ್ಷಕರಾದ ಎಚ್.ಎಸ್.ನಾಗರಾಜು ಮತ್ತು ಜಗದೀಶ್ ಅವರನ್ನು ಸನ್ಮಾನಿಸಲಾಯಿತು. ಪ್ರೌಢಶಾಲಾ ಸಹಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು ಹಾಜರಿದ್ದರು.

Leave a Reply

Your email address will not be published. Required fields are marked *