ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಗೆಲುವು ನಿಶ್ಚಿತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3 ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ ಹಿಂದಿನ ದಾಖಲೆಯನ್ನ ಮುರಿಯುವ ಎಲ್ಲಾ ಸಾಧ್ಯತೆಗಳಿವೆ. ದ್ರೌಪದಿ ಮುರ್ಮು ಅವರು ಮಾನವೀಯ ಗುಣಗಳನ್ನು ಹೊಂದಿದ್ದು, ಅತ್ಯುನ್ನತ ಸ್ಥಾನಕ್ಕೇರುವುದು ಭಾರತದ ಪ್ರಜಾಪ್ರಭುತ್ವ ಹಾಗೂ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮ್ಮದು ಎಂದರು. ದೇಶಾದ್ಯಂತ ರಾಷ್ಟ್ರಪತಿ ಚುನಾವಣೆ ನಡೆಯುತ್ತಿದೆ. ದೆಹಲಿ, ಸಂಸತ್ತಿನಲ್ಲಿ, … Continue reading ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಗೆಲುವು ನಿಶ್ಚಿತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ