More

    ದೇವಸ್ಥಾನ ಸ್ವಚ್ಛಗೊಳಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

    ಒಡಿಶಾ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್​ಡಿಎ ಅಚ್ಚರಿಯ ಅಭ್ಯರ್ಥಿ, ಜಾರ್ಖಂಡ್​ ಮಾಜಿ ರಾಜ್ಯಪಾಲೆ, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಇಂದು ಬೆಳಗ್ಗೆ ರಾಯರಂಗಪುರದ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಾಲಯವನ್ನ ಸ್ವಚ್ಛಗೊಳಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

    ರಾಷ್ಟ್ರಪತಿ ಚುನಾವಣೆಯಲ್ಲಿ ಜಾರ್ಖಂಡ್‌ನ ಮಾಜಿ ರಾಜ್ಯಪಾಲರು ಹಾಗೂ ಬುಡಕಟ್ಟು ಜನಾಂಗದ ನಾಯಕಿ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಮುರ್ಮು ಎದುರಾಳಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಕಣಕ್ಕಿಳಿಯಲಿದ್ದಾರೆ. ದ್ರೌಪದಿ ಮುರ್ಮು ಚುನಾವಣೆಯಲ್ಲಿ ಗೆದ್ದರೆ ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ ಮೊದಲ ಆದಿವಾಸಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ದ್ರೌಪದಿ ಮುರ್ಮು ಹಿನ್ನೆಲೆ: ದ್ರೌಪದಿ ಮುರ್ಮು ಅವರು ಜೂನ್ 20, 1958 ರಂದು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದಲ್ಲಿ ಜನಿಸಿದರು. ಅವರ ತಂದೆಯ ಹೆಸರು ಬಿರಂಚಿ ನಾರಾಯಣ ಟುಡು. ಸಂತಾಲ್ ಬುಡಕಟ್ಟು ಜನಾಂಗಕ್ಕೆ ಸೇರಿದರಾದ ದ್ರೌಪದಿ, ಶ್ಯಾಮ್ ಚರಣ್ ಮುರ್ಮು ಅವರನ್ನು ವಿವಾಹವಾದರು.1997 ರಲ್ಲಿ ರಾಯರಂಗಪುರ ಪುರಸಭೆಯ ಕೌನ್ಸಿಲರ್ ಆಗಿ ಆಯ್ಕೆಯಾದ ನಂತರ ತಮ್ಮ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅದೇ ವರ್ಷ ಅವರು ರಾಯರಂಗಪುರ ಪುರಸಭೆಯ ಉಪಾಧ್ಯಕ್ಷರಾಗಿ ಆಯ್ಕೆಯಾದರು.

    2000 ಮತ್ತು 2004 ರಲ್ಲಿ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರೈರಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. BJD-BJP ಮೈತ್ರಿ ಸಮಯದಲ್ಲಿ ಮಾರ್ಚ್ 6, 2000 ರಿಂದ ಆಗಸ್ಟ್ 6, 2002 ರವರೆಗೆ ವಾಣಿಜ್ಯ ಮತ್ತು ಸಾರಿಗೆ ಇಲಾಖೆಯ ರಾಜ್ಯ ಸಚಿವರಾಗಿ ಮತ್ತು ಆಗಸ್ಟ್ 6, 2002 ರಿಂದ ಮೇ 16, 2004 ರವರೆಗೆ ಮೀನುಗಾರಿಕೆ ಇಲಾಖೆ ಸಚಿವೆಯಾಗಿ ಕಾರ್ಯ ನಿರ್ವಹಿಸಿದ್ದಾರೆ . ಜೊತೆಗೆ ಜಾರ್ಖಂಡ್‌ನ ಮೊದಲ ಮಹಿಳಾ ರಾಜ್ಯಪಾಲರಾಗಿ ಕೆಲಸ ಮಾಡಿದ ಅನುಭವವಿದೆ.

    ದೇಶದಲ್ಲಿ ಆದಿವಾಸಿ ಸಮುದಾಯಗಳ ಜನಸಂಖ್ಯೆ 12 ಕೋಟಿಗೂ ಹೆಚ್ಚಿದೆ. ಇತರ ಸಮುದಾಯಗಳಿಗೆ ಹೋಲಿಸಿದರೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ರಂಗದಲ್ಲಿ ಆದಿವಾಸಿಗಳ ಭಾಗವಹಿಸುವುದು ತುಂಬಾ ಕಡಿಮೆ. ಹೀಗಾಗಿ, ದ್ರೌಪದಿ ಮುರ್ಮು ಹೆಸರನ್ನು ಘೋಷಣೆ ಮಾಡುವ ಮೂಲಕ ಎನ್‌ಡಿಎ ತನ್ನ ಕಾರ್ಯಸೂಚಿಯಲ್ಲಿ ಸಾಮರಸ್ಯ ಮತ್ತು ಸರ್ವವ್ಯಾಪಿ ಸಮಾಜದ ಪರಿಕಲ್ಪನೆಯೇ ಪ್ರಧಾನ ಎಂಬ ಸಂದೇಶವನ್ನು ನೀಡಲು ಪ್ರಯತ್ನಿಸಿದೆ.

    ರಾಷ್ಟ್ರಪತಿ ಅಭ್ಯರ್ಥಿ ಘೋಷಣೆ: ಎನ್​ಡಿಎಯಿಂದ ದ್ರೌಪದಿ, ಯುಪಿಎ ಕಡೆಯಿಂದ ಸಿನ್ಹಾ…

    ಟೆಲಿಗ್ರಾಂ ಆ್ಯಪ್ ಕೂಡ ಈಗ ಡಬಲ್ ಇಂಜಿನ್​!; ಎಲ್ಲ ದುಪ್ಪಟ್ಟು, ಏನದು ಹೊಸ ಅಪ್​ಡೇಟ್ಸ್​?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts