

ನವದೆಹಲಿ: ಸೋಮವಾರ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ದೇಶದ ಸುಮಾರು 4800 ಚುನಾಯಿತ ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಸಂಸತ್ ಭವನ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮತದಾನ ನಡೆಯಲಿದೆ. ಜುಲೈ 21ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆಯಲಿದ್ದು, ಜುಲೈ 25ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಎನ್ಡಿಎ ಅಭ್ಯರ್ಥಿ ದ್ರೌಪದಿ ಮರ್ಮು ಅವರು ಗೆಲುವು ಬಹುತೇಕ ಖಚಿತವಾಗಿದ್ದು, ಶೇ.60ರಷ್ಟು ಮತಗಳನ್ನು ಪಡೆದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸೋಲಿಸುವ ಸಾಧ್ಯತೆ ಇದೆ. ಒಟ್ಟು 10,86,431 ಮತಗಳ ಪೈಕಿ ವಿವಿಧ ಪ್ರಾದೇಶಿಕ ಪಕ್ಷಗಳ ಬೆಂಬಲದ ನಂತರ ಎನ್ಡಿಎ ಅಭ್ಯರ್ಥಿ 6.67 ಲಕ್ಷಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದಾರೆ.
ಈಗಾಗಲೇ ಎನ್ಡಿಎಗೆ ವೈಎಸ್ಆರ್ ಕಾಂಗ್ರೆಸ್, ಬಿಜು ಜನತಾದಳ, ಎಐಎಡಿಎಂಕೆ, ತೆಲುಗು ದೇಶಂ ಪಕ್ಷ, ಶಿರೋಮಣಿಅಕಾಲಿದಳ, ಶಿವಸೇನೆ ಸೇರಿದಂತೆ ಬಹುತೇಕ ಪ್ರಾದೇಶಿಕ ಪಕ್ಷಗಳು ಬೆಂಬಲ ಸೂಚಿಸಿರುವುದರಿಂದ ಮರ್ಮು ಅವರು ಗೆಲುವು ಸಾಧಿಸಲಿದ್ದಾರೆ. (ಏಜೆನ್ಸೀಸ್)