ಸಾಧಕರಿಗೆ ಗೌರವದಿಂದ ಇತರರಿಗೆ ಪ್ರೇರಣೆ; ಮೈಮುನಾ- ಮರ್ಝಿನಾರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ವೈ.ಭರತ್ ಶೆಟ್ಟಿ

IMG-20240310-WA0097
Published on

ಮಂಗಳೂರು: ಸಮಾಜದಲ್ಲಿ ಸಾಧಕರು, ಹಿರಿಯರನ್ನು ಗುರುತಿಸಿ ಗೌರವಿಸುವುದು ಇತರರಿಗೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ತಿಳಿಸಿದ್ದಾರೆ.
ಮರವೂರು ದಿ ಗ್ರ್ಯಾಂಡ್ ಬೇ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ ಮಂಗಳೂರು ಪ್ರೆಸ್‌ಕ್ಲಬ್ ದಿನಾಚರಣೆಯಲ್ಲಿ ಪ್ರೆಸ್ ಕ್ಲಬ್ ಪ್ರಶಸ್ತಿ ಯನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.
ಹೈನುಗಾರಿಕೆಯ ಮೂಲಕ ಸಾಧನೆ ಮಾಡಿದ ಮೈಮೂನಾ ಮತ್ತು ಮರ್ಝಿನಾ ಅವರನ್ನು ಗುರುತಿಸಿ ಪ್ರೆಸ್ ಕ್ಲಬ್ ಪ್ರಶಸ್ತಿ ನೀಡಿರುವುದು ಮತ್ತು ಹಿರಿಯ ಪತ್ರಕರ್ತರನ್ನು ಗುರುತಿಸಿ ಗೌರವಿಸುತ್ತಿರುವುದು ಶ್ಲಾಘನೀಯ. ಪತ್ರಕರ್ತರು ತಮ್ಮ ಒತ್ತಡಗಳ ನಡುವೆ ಕುಟುಂಬ ಸಂಗಮದಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ಮಾದರಿ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರೆಸ್ ಕ್ಲಬ್ ದಿನಾಚರಣೆಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ  ಚಲನಚಿತ್ರ ನಟ ನಿರ್ದೇಶಕ, ನಿರ್ಮಾಪಕ ದೇವದಾಸ್ ಕಾಪಿಕಾಡ್ ಅವರು, ಸಮಾಜದಲ್ಲಿ ಮಾಧ್ಯಮ ರಂಗ ಮಹತ್ವದ ಸ್ಥಾನವನ್ನು ಪಡೆದಿದೆ. ಬದಲಾದ ಸನ್ನಿವೇಶದಲ್ಲಿ ಎಚ್ಚರಿಕೆಯಿಂದ ಪ್ರತಿ ಬರಹ, ಮಾತು ಪ್ರಕಟವಾಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಲಾವಿದರು ಮತ್ತು ಬರಹಗಾರರ ಹೊಣೆಗಾರಿಕೆ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟರು.
ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷ ತೆ ವಹಿಸಿದ್ದರು.
* ಮೈಮೂನಾ-ಮತ್ತು ಮರ್ಝೀನಾರಿಗೆ ಪ್ರಶಸ್ತಿ
ಪ್ರೆಸ್ ಕ್ಲಬ್ ಪ್ರಶಸ್ತಿ ವಿಜೇತರಾದ ಮೈಮೂನಾ-ಮತ್ತು ಮರ್ಝೀನಾರಿಗೆ ಶಾಸಕ ಡಾ.ವೈ.ಭರತ್ ಶೆಟ್ಟಿ ಪ್ರಶಸ್ತಿ ವಿತರಿಸಿದರು.
ಸಮಾರಂಭದಲ್ಲಿ ಹಿರಿಯಪತ್ರಕರ್ತರಾದ ಅನ್ನು ಮಂಗಳೂರು, ರಾಘವೇಂದ್ರ ಭಟ್,  ಪ್ರಕಾಶ್ ಮಂಜೇಶ್ವರ , ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ, ರವೀಂದ್ರ ಶೆಟ್ಟಿ ಕುತ್ತೆತ್ತೂರು, ರಾಜೇಶ್ ಕಿಣಿ, ಶರತ್ ಸಾಲ್ಯಾನ್, ಅಶೋಕ್. ಶೆಟ್ಟಿ ಬಿ.ಎನ್.ಅವರುಗಳಿಗೆ ಪ್ರೆಸ್‌ಕ್ಲಬ್ ಗೌರವ ಸನ್ಮಾನ, ಪುರಸ್ಕಾರ  ನೀಡಲಾಯಿತು. ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಪ್ರೆಸ್ ಕ್ಲಬ್ ಸಿಬ್ಬಂದಿ ಚಂಚಲಾಕ್ಷಿ, ಪ್ರೆಸ್ ಕ್ಲಬ್ ಪ್ರಶಸ್ತಿ ತೀರ್ಪುಗಾರರಾದ ಉಪನ್ಯಾಸಕ ಪುಷ್ಪರಾಜ್ ಮತ್ತು ಪತ್ರಕರ್ತ ಕುಮಾರ್‌ನಾಥ್ ಅವರನ್ನುಗೌರವಿಸಲಾಯಿತು.
ಮತದಾನದ ಪ್ರತಿಜ್ಞಾ ವಿಧಿಯನ್ನು  ಹರೀಶ್ ಮೋಟುಕಾನ ನೆರವೇರಿಸಿದರು. ನಿಖಿಲ್ ಶೆಟ್ಟಿ ಮನೋರಂಜನಾ ಕ್ರೀಡಾ ಕಾರ್ಯಕ್ರಮ ನಿರ್ವಹಿಸಿದರು.
ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಭಾಸ್ಕರ ಕೆ, ಮನಪಾ ಸದಸ್ಯ ನವೀನ್ ಡಿ ಸೋಜ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಕರ್ನಾಟಕ ಕಾರ್ಯ ನಿರತ ಪತ್ರ ಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ಪೂರ್ವಾಧ್ಯಕ್ಷ  ಅನ್ನು ಮಂಗಳೂರು, ಹಿರಿಯ ಪತ್ರಕರ್ತರಾದ ರವೀಂದ್ರ ಶೆಟ್ಟಿ, ವಾಲ್ಟರ್ ನಂದಳಿಕೆ ಉಪಸ್ಥಿತರಿದ್ದರು. ಸತೀಶ್ ಇರಾ ಪ್ರಾರ್ಥಿಸಿದರು. ಮಹಮ್ಮದ್ ಆರೀಫ್ ಪಡುಬಿದ್ರಿ, ಆರ್.ಸಿ.ಭಟ್ ಮತ್ತು ಆತ್ಮಭೂಷಣ್ ಭಟ್ ಸನ್ಮಾನಿತರನ್ನು ಪರಿಚಯಿಸಿದರು.  ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

Ll

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net