More

    ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ನಿಲ್ಲಲ್ಲಿ: ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೀಲಾರ ಕೃಷ್ಣ ಸಲಹೆ

    ಮಂಡ್ಯ: ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಘೋಷಣೆ ಮಾಡಿದ್ದ ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿಕೊಡಬೇಕು. ಅಂತೆಯೇ ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ನಿಲ್ಲಿಸಬೇಕೆಂದು ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೀಲಾರ ಕೃಷ್ಣ ಆಗ್ರಹಿಸಿದರು.
    ಇತ್ತೀಚೆಗೆ ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದಿಂದ ನಾಮನಿರ್ದೇಶನಕ್ಕೆ ಒತ್ತಡಗಳು ಹೆಚ್ಚುತ್ತಿವೆ. ಪರಿಣಾಮ ಸಹಕಾರ ಕ್ಷೇತ್ರದ ಮೂಲ ಉದ್ದೇಶ ಹಾಳಾಗುತ್ತಿರುವುದು ಆತಂಕಕಾರಿ ಸಂಗತಿ. ಇನ್ನು ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಲಾಗುತ್ತಿದೆ. ಮೈಸೂರು ಜಿಲ್ಲಾ ಹಾಲು ಒಕ್ಕೂಟದಲ್ಲಿ 13 ಚುನಾಯಿತ ನಿರ್ದೇಶಕರಿದ್ದಾರೆ. ನಾಲ್ವರು ಅಧಿಕಾರಿಗಳಿದ್ದು, ಅವರೊಂದಿಗೆ ಒಂದು ನಾಮ ನಿರ್ದೇಶನವಿದೆ. ಈಗ ಮತ್ತೆ ಹೊಸದಾಗಿ ಮೂರು ನಾಮನಿರ್ದೇಶನ ಮಾಡಿದರೆ ಸರ್ಕಾರದವರೇ ಅಧ್ಯಕ್ಷರಾಗುತ್ತಾರೆ. ಇದು ಸಹಕಾರ ಕ್ಷೇತ್ರಕ್ಕೆ ಅಪಚಾರ ಎನ್ನುವಂತೆ ಹೇಳಿರುವ ಮಾತನ್ನು ಮೀಸಲಾತಿ ವಿರೋಧಿ ಎಂದು ಭಾವಿಸುತ್ತಿರುವುದು ಸರಿಯಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಜಿಲ್ಲಾ ಸಹಕಾರ ಯೂನಿಯನ್ ಒಕ್ಕೂಟದ ಮಾಜಿ ಅಧ್ಯಕ್ಷ ಜಿ.ಟಿ.ಪುಟ್ಟಸ್ವಾಮಿ ಗೆಜ್ಜಲಗೆರೆ, ಮನ್‌ಮುಲ್ ಮಾಜಿ ಅಧ್ಯಕ್ಷ ಕಾರ್ಕಳ್ಳಿ ಬಸವೇಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts