More

    ನೀರು ಬಳಕೆದಾರರ ಸಂಘ ಬಲವರ್ಧನೆಗೊಳ್ಳಲಿ: ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳದ ನಿರ್ದೇಶಕ ಎಂ.ಯೋಗೀಶ್ ಒತ್ತಾಯ

    ಮಂಡ್ಯ: ನೀರು ನಿರ್ವಹಣೆ ಮತ್ತು ಸದ್ಬಳಕೆ ಮಾಡುವ ಮಹತ್ವಾಕಾಂಕ್ಷೆಯೊಡನೆ ಪ್ರಾಂಭಿಸಿದ ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆ ಅವಶ್ಯಕವಾಗಿದೆ ಎಂದು ಕೆ.ಆರ್.ಎಸ್ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳದ ನಿರ್ದೇಶಕ ಮಂಗಲ ಎಂ.ಯೋಗೀಶ್ ಒತ್ತಾಯಿಸಿದರು.
    ಕಳೆದ ಸಾಲಿನಲ್ಲಿ ಭೀಕರ ಕ್ಷಾಮ ತಲೆದೋರಿದ ಸಂದರ್ಭದಲ್ಲಿ ನೀರು ನಿರ್ವಹಣೆಯ ಮಹತ್ವ ಹಿಂದೆಂದಿಗಿಂತಲೂ ಪ್ರಸ್ತುತತೆ ಇದೆ ಎನಿಸುತ್ತಿದೆ. ಇದರ ಮಹತ್ವವನ್ನು ಅರಿತು ಇಡೀ ರಾಷ್ಟ್ರದಲ್ಲಿ ಸಹಕಾರ ತತ್ವದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳನ್ನು ಸ್ಥಾಪಿಸಿದ ಹೆಗ್ಗುರುತು ಕಾಂಗ್ರೆಸ್ ಸರ್ಕಾರಕ್ಕಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ನೀರಾವರಿ ಕಾಯ್ದೆಗೆ ತಿದ್ದುಪಡಿ ತಂದು ಪರಿಣಾಮಕಾರಿಯಾಗಿ ಅನುಷ್ಠಾವಾಗಬೇಕೆಂಬ ಮಹತ್ವಾಕಾಂಕ್ಷೆ ರೈತರು, ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳಲ್ಲಿ ಇರಬೇಕಾದದ್ದು ಅವಶ್ಯಕವಾಗಿದೆ. ಕಳೆದ ಮೂರು ದಶಕದಿಂದ ಸಂಘಗಳು ನಿರೀಕ್ಷಿತ ಪ್ರಮಾಣದಲ್ಲಿ ಯಶ ಸಾಧಿಸದಿರುವುದು ವಿಷಾಧನೀಯ. ಈ ಸಂಬಂಧ ನೀರು ಬಳಕೆದಾರರ ಸಹಕಾರ ಸಂಘ, ವಿತರಣಾ ನಾಲಾ ವ್ಯಾಪ್ತಿಯಲ್ಲಿ ಒಕ್ಕೂಟ, ಅಣೆಕಟ್ಟೆ ವ್ಯಾಪ್ತಿಯಲ್ಲಿ ಯೋಜನಾ ಮಟ್ಟದ ಮಹಾ ಮಂಡಳ, ರಾಜ್ಯ ಮಟ್ಟದಲ್ಲಿ ಶೃಂಗ ಮಹಾ ಮಂಡಳಗಳು ರಚನೆಯಾಗಬೇಕಾಗಿದೆ ಎಂದು ಹೇಳಿದರು.
    ವಿಕೇಂದ್ರಿತ ಸಂಘಗಳ ಕಾರ್ಯಚಟುವಟಿಕೆಗಳು ಪ್ರಸಕ್ತ ಹೆಚ್ಚು ಪರಿಣಾಮಕಾರಿಯಾಗಿ ಜರುಗಬೇಕಾದರೆ ತಾವು ವಿಶೇಷದ ಕಾಳಜಿಯನ್ನು ವಹಿಸಬೇಕಾಗಿದೆ. ಯೋಜನೆಗಿಂತ ಮುನ್ನ 2000ನೇ ಇಸವಿಯಲ್ಲಿ ಕರ್ನಾಟಕ ಸರ್ಕಾರ ನೀರಾವರಿ ಕಾಯ್ದೆಯನ್ನು ತಿದ್ದುಪಡಿ ತಂದು ನೀರು ಬಳಕೆದಾರರ ಸಹಕಾರ ಸಂಘಗಳಿಗೆ ಬಲವರ್ಧನೆಗೆ ಸಹಕಾರಿಯಾಗಿದ್ದು, ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಒತ್ತಾಯಿಸಿದರು.
    ರಾಜ್ಯಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ನೇತೃತ್ವದ ಆಡಳಿತ ಸುಧಾರಣಾ ಆಯೋಗದ 6ನೇ ವರದಿಯು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡರೆ ನೀರು ಬಳಕೆದಾರರ ಸಹಕಾರ ಸಂಘಗಳು ರಾಜ್ಯದಲ್ಲಿ ಸಮರ್ಪಕವಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ. ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು ರೈತರಿಗೆ ಸಾಲ ವಿತರಿಸುವಾಗ ನೀರು ಬಳಕೆದಾರರ ಸಹಕಾರ ಸಂಘಗಳಿಂದ ಬೇ ಬಾಕಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳುವಂತೆ ಸೂಚಿಸಬೇಕು. ಕೇಂದ್ರ ಸರ್ಕಾರದ ಧನ ಸಹಾಯದ ಕಾರ‌್ಯಕ್ರಮದಲ್ಲಿ ನೀರು ಬಳಕೆದಾರರ ಸಂಘಗಳಿಗೆ ಮೂಲಭೂತ ಸೌಕರ‌್ಯಗಳನ್ನು ಕಲ್ಪಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವುದು ಅಗತ್ಯವಿದೆ ಎಂದು ಒತ್ತಾಯಿಸಿದರು.
    ನೀರು ಬಳಕೆದಾರರ ಸಹಕಾರ ಸಂಘಗಳಿಗೆ ವಾರ್ಷಿಕ ಕಾರ್ಯಾಧನವನ್ನು 1 ಲಕ್ಷ ರೂನಿಂದ 5 ಲಕ್ಷ ರೂವರೆಗೆ ನೀಡುವಂತೆ ಆದೇಶಿಸಬೇಕು. ನಿಗಮಗಳಲ್ಲಿ ಹೊಲಗಾಲುವೆಗಳ ನಿರ್ವಹಣೆ ಜವಾಬ್ದಾರಿಯನ್ನು 5 ಲಕ್ಷಗಳವರೆಗೆ ಸಂಘಗಳಿಗೆ ನೀಡಿ ಬಲವರ್ಧನೆ ಮಾಡಿ ಕ್ರಮ ಕೈಗೊಳ್ಳಬೇಕು. 2023-24 ತೀವ್ರತರ ಬರಗಾಲ ಬಂದಿರುವುದರಿಂದ ಸಂಗ್ರಹಿಸುವ ನೀರುವ ತೆರಿಗೆಯನ್ನು ಮನ್ನಾ ಮಾಡಬೇಕು. ವಿಶ್ವೇಶ್ವರಯ್ಯ ನಾಲಾ ಆಧುನೀಕರಣ ಕಾಮಗಾರಿಯನ್ನು ನಿಲ್ಲಿಸಿ, ಪ್ರಸಕ್ತ ಮುಂಗಾರಿನಲ್ಲಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಮಹಾ ಮಂಡಳಕ್ಕೆ ಷೇರು ಧನವಾಗಿ 1 ಕೋಟಿ ರೂಗಳನ್ನು ಸರ್ಕಾರ ನೀಡಿ ಸಮರ್ಪಕವಾಗಿ ಕಾರ್ಯ ನಿರ್ವಹಣೆ ಮಾಡಲು ಅನುವು ಮಾಡಿಕೊಡಬೇಕಾಗಿದೆ ಎಂದು ಹೇಳಿದರು.
    ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷ ಎಂ.ಇ.ಮಹೇಶ, ರವಿ, ಚನ್ನಪ್ಪ, ಎಂ.ವಿ.ಸುರೇಶ, ಚಂದ್ರಶೇಖರ್ ಇದ್ದರು.

    See also  ವಿದ್ಯಾರ್ಥಿನಿ ಶಿಕ್ಷಣಕ್ಕೆ ಆರ್ಥಿಕ ನೆರವು: ಮದ್ದೂರಿನ ಧ್ವನಿ ಸಂಸ್ಥೆಯಿಂದ ಮಾದರಿ ಸೇವೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts