More

    ಸೆ.30ರಂದು ಚಿತ್ರಕಲಾ ಪ್ರದರ್ಶನ, ವಿಚಾರ ಸಂಕಿರಣ: ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಕದಂಬ ಮಾಹಿತಿ

    ಮಂಡ್ಯ: ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಂಘದ ಸಹಯೋಗದಲ್ಲಿ ಸೆ.30ರಂದು ನಗರದಲ್ಲಿ ಪಿ.ಆರ್.ತಿಪ್ಪೇಸ್ವಾಮಿ ಜನ್ಮಶತಮಾನೋತ್ಸವ ಸಮಾರಂಭ ಹಾಗೂ ಚಿತ್ರಕಲಾ ಪ್ರದರ್ಶನ, ಚಿತ್ರಕಲಾ ಸ್ಪರ್ಧೆ ಮತ್ತು ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು.
    ಸದ್ವಿದ್ಯಾ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬೆಳಗ್ಗೆ 10.30ಕ್ಕೆ ಚಿತ್ರಕಲಾ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಜಿ.ಪಂ ಸಿಇಒ ಶೇಖ್ ತನ್ವೀರ್ ಆಸೀಫ್ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯಕುಮಾರ್, ಸಂಘಟಕಿ ನಾಗರೇವಕ್ಕ, ಸದ್ವಿದ್ಯಾ ಎಜುಕೇಷನ್ ಟ್ರಸ್ಟ್ ಎಂ.ಕೆ.ಹರೀಶ್‌ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಸಂಜೆ 5.30ಕ್ಕೆ ಪಿ.ಆರ್.ತಿಪ್ಪೇಸ್ವಾಮಿ ಜನ್ಮಶತಮಾನೋತ್ಸವ ಸಮಾರಂಭವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಉದ್ಘಾಟಿಸುವರು. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಅಧ್ಯಕ್ಷತೆ ವಹಿಸುವರು. ರೆಡ್‌ಕ್ರಾಸ್ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಪಿಆರ್‌ಟಿ ಭಾವಚಿತ್ರ ಅನಾವರಣ ಮಾಡುವರು. ರಾಜಶೇಖರ ಕದಂಬ ಆಶಯ ನುಡಿಯನ್ನಾಡಲಿದ್ದು, ಸಾಹಿತಿ ತೈಲೂರು ವೆಂಕಟಕೃಷ್ಣ ಅವರು ಜಾನಪದ-ಪಿಆರ್‌ಟಿ ಕುರಿತು ವಿಚಾರ ಮಂಡಿಸುವರು. ಮೈಸೂರಿನ ಶ್ರೀ ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ ಪ್ರಾಂಶುಪಾಲ ಕೆ.ಸಿ.ಮಹದೇವಶೆಟ್ಟಿ ಚಿತ್ರಕಲೆ-ಪಿಆರ್‌ಟಿ ಕುರಿತು ವಿಚಾರ ಮಂಡಿಸಲಿದ್ದಾರೆ. ಪಿಆರ್‌ಟಿ ಟ್ರಸ್ಟ್ ಪದಾಧಿಕಾರಿಗಳಾದ ರುದ್ರಣ್ಣ ಹರ್ತಿಕೋಟೆ, ಎಚ್.ಎಂ.ಪರಮೇಶ್ವರಯ್ಯ, ಮಾನಸಾ, ಬಾಬುರಾವ್, ಸಿ.ಚಿಕ್ಕಣ್ಣ, ಚಂದ್ರಶೇಖರಯ್ಯ ಭಾಗವಹಿಸುವರು ಎಂದು ವಿವರಿಸಿದರು.
    ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ, ಪಿಆರ್‌ಟಿ ಟ್ರಸ್ಟ್‌ನ ಮಹದೇವಶೆಟ್ಟಿ, ಮಾನಸಾ ಇದ್ದರು.

    ರಾಜ್ಯೋತ್ಸವ ರಸಪ್ರಶ್ನೆ - 20

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts