ಮಂಡ್ಯ: ತಾಲೂಕಿನ ಕರಡಿಕೊಪ್ಪಲು ಗ್ರಾಮದಲ್ಲಿ ನಿರ್ಮಿಸಲಾಗಿರುವ ಸಿದ್ದರಾಮಯ್ಯ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ ಕಾರ್ಯಕ್ರಮವನ್ನು ಜೂ.15ರಂದು ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಶಶಿಧರ್ ತಿಳಿಸಿದರು.
ಕೆಪಿಸಿಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಸಿ.ಪುಟ್ಟಸ್ವಾಮಿ ಶುದ್ದ ಕುಡಿಯುವ ನೀರಿನ ಘಟಕವನ್ನು ಸ್ವಂತ ಖರ್ಚಿನಲ್ಲಿ ನಿರ್ಮಿಸಿದ್ದಾರೆ. ಅಂದು ಘಟಕವನ್ನು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಡಾ.ರಾಮಮನೋಹರ ಲೋಹಿಯ ವಿಚಾರ ವೇದಿಕೆಯ ಅಧ್ಯಕ್ಷ ಬಿ.ಎಸ್.ಶಿವಣ್ಣ ಉಪಸ್ಥಿತಿ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮುಖ್ಯ ಅತಿಥಿಗಳಾಗಿ ಕೆ.ಆರ್.ನಗರ ಶಾಸಕ ರವಿಶಂಕರ್, ಕಡೂರು ಶಾಸಕ ಆನಂದ್, ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಆರ್.ಮಹದೇವು, ಕುರುಬರ ಸಂಘದ ಜಿಲ್ಲಾಧ್ಯಕ್ಷ ಸುರೇಶ್, ಮನ್‌ಮುಲ್ ಅಧ್ಯಕ್ಷ ಶಿವಪ್ಪ, ಸಮಾಜ ಸೇವಕ ಸ್ಟಾರ್ ಚಂದ್ರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸಂಘದ ಖಜಾಂಚಿ ಎಸ್.ಎನ್.ರಾಜು, ಕೆಂಚಪ್ಪ, ಯತೀಶ್, ಮಹದೇವ್, ಮಹೇಶ್, ಅರುಣ್, ರಮೇಶ್ ಇದ್ದರು.
ಜೂ.15ರಂದು ಕರಡಿಕೊಪ್ಪಲಿನಲ್ಲಿ ನೀರಿನ ಘಟಕ ಲೋಕಾರ್ಪಣೆ: ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಶಶಿಧರ್ ಹೇಳಿಕೆ

You Might Also Like
ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season
rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…
ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips
Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…