ಮುದ್ರಣ ಮಾಧ್ಯಮಕ್ಕಿಲ್ಲ ಸಾವು

Koppa patrika

ಕೊಪ್ಪ: ಈ ಹಿಂದಿನಿಂದಲೂ ಪತ್ರಿಕೆಗಳು ಲೇಖನ ಮತ್ತು ಸುದ್ದಿಗಳನ್ನು ಬಿತ್ತರಿಸುವ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದೆ. ದೃಶ್ಯ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳು ಹೆಚ್ಚು ಪ್ರಚಲಿತದಲ್ಲಿರುವ ಈ ದಿನದಲ್ಲಿ ಪತ್ರಿಕೆಗಳು ತನ್ನ ನಿಖರ ವರದಿಗಳಿಂದ ಜೀವಂತಿಕೆಯನ್ನು ಉಳಿಸಿಕೊಂಡಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಚಿಕ್ಕಮಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೊಪ್ಪ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಯುನೈಟೆಡ್ ವರ್ಕಿಂಗ್ ಜರ್ನಲಿಸ್ಟ್ ಅಸೋಸಿಯೇಷನ್ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪತ್ರಿಕೆ ಪಾರದರ್ಶಕವಾಗಿ ಇರಬೇಕು. ಪತ್ರಿಕೆಗಳು ಏಳು-ಬೀಳುಗಳನ್ನು ಕಂಡಿದ್ದರೂ ಮುದ್ರಣ ಮಾಧ್ಯಮಕ್ಕೆ ಸಾವಿಲ್ಲ. ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಹಳ್ಳಿಗಳಲ್ಲಿ ಸೇವೆ ಸಲ್ಲಿಸುವ ಪತ್ರಕರ್ತರ ಪರಿಸ್ಥಿತಿ ಉತ್ತಮವಾಗಿಲ್ಲ. ತಾಲೂಕುಗಳಲ್ಲಿ ಪತ್ರಕರ್ತರ ಭವಿಷ್ಯ ನಿಧಿ ಸ್ಥಾಪಿಸಬೇಕು. ಈ ನಿಟ್ಟಿನಲ್ಲಿ ನಾನು ಸಹಕಾರ ನೀಡಲು ಸಿದ್ದ ಎಂದು ತಿಳಿಸಿದರು.
ಪತ್ರಕರ್ತ ವೈ.ಗ.ಜಗದೀಶ್ ಮಾತನಾಡಿ, ಪತ್ರಕರ್ತರಿಗೆ ಸರ್ಕಾರವನ್ನು ಬದಲಾಯಿಸುವ ಸಾರ್ಮಥ್ಯವಿರುತ್ತದೆ. ಪಿ.ಲಂಕೇಶ್ ಸರ್ಕಾರವನ್ನು ಬದಲಾಯಿಸಿ ತೋರಿಸಿದ್ದರು. ಪತ್ರಕರ್ತರು ಯಾವುದೇ ಮುಲಾಜಿಗೆ ಒಳಗಾಗದೆ ಕೆಲಸದಲ್ಲಿ ನಿಷ್ಠೆಯನ್ನು ತೋರಿದಲ್ಲಿ ಪತ್ರಿಕಾರಂಗದಲ್ಲಿ ಹೊಸ ಭಾಷ್ಯವನ್ನು ಬರೆಯಲು ಸಾಧ್ಯವಿದೆ ಎಂದರು.
ಪತ್ರಕರ್ತ ತನ್ನ ಕೆಲಸವನ್ನು ಉದ್ಯಮವಾಗಿ ಸ್ವೀಕರಿಸದೆ ಸಮಾಜದ ಒಳಿತಿಗೆ ತಮ್ಮ ಕೆಲಸವನ್ನು ಮೀಸಲಿಡುವಂತಾಗಬೇಕು. ಇಂದಿನ ದಿನದಲ್ಲಿ ಸಾಮಾಜಿಕ ಕಳಕಳಿ ಹೊಂದಿರುವ ಪತ್ರಕರ್ತರ ಸಂಖ್ಯೆ ಕಡಿಮೆಯಾಗಿದೆ. ಸಾಮಾಜಿಕ ಹೋರಾಟಗಳ ಹಿನ್ನಲೆ ಹೊಂದಿರದೇ ಪತ್ರಿಕಾರಂಗಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳು ಸಮಾಜದ ಒಂದು ಭಾಗವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉತ್ತಮ ವರದಿಗಳನ್ನು ಪ್ರಕಟಿಸಿದ ಪತ್ರಕರ್ತರಿಗೆ ಪ್ರಶಸ್ತಿಗಳನ್ನು ನೀಡಲಾಯಿತು. ಪತ್ರಕರ್ತರಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು. ಜಿಲ್ಲಾಧ್ಯಕ್ಷ ಸಿ.ಎಚ್.ಮೂರ್ತಿ, ತಾಲೂಕು ಅಧ್ಯಕ್ಷ ಜಿನೇಶ್ ಇರ್ವತ್ತೂರು, ಪತ್ರಕರ್ತ ವಿಶ್ವನಾಥ್ ಶೆಟ್ಟಿ, ಕೆ. ಜಯಕುಮಾರ್, ಪ್ರಮುಖರಾದ ಕೆ.ಎಸ್.ಸೋಮಶೇಖರ್, ಲೋಕೇಶಪ್ಪ, ಅರುಣ್ ಸಾಗರ್, ಹಮೀದ್ ಇತರರಿದ್ದರು.

Share This Article

ಎಚ್ಚರ, ದೇಹ ದಣಿದಿದ್ರೂ ನಿದ್ದೆ ಬರ್ತಿಲ್ಲವೇ? ಸಿರ್ಕಾಡಿಯನ್ ಸಿಂಡ್ರೋಮ್​ ಇರಬಹುದು!!

ಬೆಂಗಳೂರು: ದೇಹ ದಣಿದಿರುತ್ತದೆ. ಆದರೆ ನಿದ್ರೆ ಬರುತ್ತಿಲ್ಲ. ಇದಕ್ಕೆ ದೇಹದ ಸಿರ್ಕಾಡಿಯನ್ ಲಯ ತಪ್ಪಿರುವುದು, ಅತಿಯಾದ…

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…