More

    5 ಕೋಟಿ ರೂ. ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆಗೆ ಪತ್ರಿಕಾ ವಿತರಕರ ಮನವಿ

    ಶಿವಮೊಗ್ಗ: ಪತ್ರಿಕಾ ವಿತರಕರಿಗೆ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಕಲ್ಪಿಸುವುದು, ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಬಜೆಟ್‌ನಲ್ಲಿ ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

    ಪತ್ರಿಕಾ ವಿತರಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಹೆಮ್ಮೆಯ ವಿಷಯ. ಅಪಘಾತ ವಿಮೆಯನ್ನು ಘೋಷಣೆ ಮಾಡಲಾಗಿದೆ. ಆದರೆ, ಇನ್ನೂ ಕೆಲವು ಸಮಸ್ಯೆಗಳಿವೆ. ಈ ಬಾರಿಯ ಬಜೆಟ್‌ನಲ್ಲಿ ಪತ್ರಿಕಾ ವಿತರಕರಿಗಾಗಿ ಕನಿಷ್ಠ 5 ಕೋಟಿ ರೂ. ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.
    ನಗರ ಹಾಗೂ ತಾಲೂಕು ಮಟ್ಟದಲ್ಲಿ ಪತ್ರಿಕೆಗಳ ವಿತರಣೆ ಮಾಡುವ ವಿತರಕರಿಗೆ 20*30 ಅಳತೆಯ ನಿವೇಶನಗಳನ್ನು ಮಂಜೂರು ಮಾಡಿಕೊಡಬೇಕು. ಎಲೆಕ್ಟ್ರಿಕಲ್ ಬೈಕ್‌ಗಳನ್ನು ಕೊಳ್ಳಲು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕು ಎಂದು ಮನವಿ ಮಾಡಿದರು.
    ಜಿಲ್ಲಾ ಘಟಕದ ಅಧ್ಯಕ್ಷ ಎನ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಮುಕ್ತಾರ್ ಅಹಮದ್(ನಜೀರ್), ಸಂಘಟನಾ ಕಾರ್ಯದರ್ಶಿ ಪರಶುರಾಮ್ರಾವ್, ನಿರ್ದೇಶಕ ಸೈಯದ್ ಅಶ್ರಫ್, ಸದಸ್ಯರಾದ ಪ್ರಾಣೇಶ್, ಮಹಮ್ಮದ್ ಅಝೀಝುಲ್ಲಾ, ರಘುರಾಮ್ ಜೈನ್, ಮಲ್ಲಿಕಾರ್ಜುನ್, ಮಧು, ಸೋಮಶೇಖರ್, ದೇವೇಂದ್ರಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts