೧೪ರಂದು ಶೀಂಟೂರು ಸ್ಮೃತಿ ಕಾರ್ಯಕ್ರಮ – ಮುಖ್ಯಶಿಕ್ಷಕಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಶಿಷ್ಯವೇತನ

ಪುತ್ತೂರು: ನಿವೃತ್ತ ಸೇನಾನಿ, ಶಿಕ್ಷಕ ದಿ.ಶೀಂಟೂರು ನಾರಾಯಣ ರೈ ಸ್ಮರಣೆಯಲ್ಲಿ ೧೩ನೇ ವರ್ಷದ ಸ್ಥಾಪಕರ ದಿನವನ್ನು ಶೀಂಟೂರು ಸ್ಮೃತಿ ಎಂಬ ಶಿರೋನಾಮೆಯಲ್ಲಿ ಆಚರಿಸಲಾಗುತ್ತಿದೆ. ಎಸ್.ಎನ್.ಆರ್ ರೂರಲ್ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾಚೇತನ ಸಭಾಂಗಣದಲ್ಲಿ ಆ.೧೪ರಂದು ಬೆಳಗ್ಗೆ ‘ಶೀಂಟೂರು ಸ್ಮೃತಿ -೨೦೨೪’ಕಾರ್ಯಕ್ರಮ ನಡೆಯಲಿದೆ ಎಂದು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಹೇಳಿದರು.


ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಽಕಾರಿ ಅಶ್ವಿನ್ ಎಲ್. ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶೀಂಟೂರು ಸನ್ಮಾನವನ್ನು ಈ ಬಾರಿ ಶಿಕ್ಷಕ ಕ್ಷೇತ್ರಕ್ಕೆ ಮೀಸಲಿಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕಿ ರೂಪಕಲಾ ಕೆ. ಅವರಿಗೆ ನೀಡಿ ನೀಡಲಾಗುವುದು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ಶೀಂಟೂರು ಸಂಸ್ಮರಣೆ ಮಾಡಲಿದ್ದಾರೆ. ಬಳ್ಳಾರಿ ಕುಮಾರಸ್ವಾಮಿ ಮಿನರಲ್ ಎಕ್ಸ್‌ಪೋರ್ಟ್ಸ್‌ನ ಮಾಲಕ ಮಲಾರ್‌ಬೀಡು ರವೀಂದ್ರನಾಥ ಆಳ್ವ, ಗುಜರಾತ್‌ನ ಗ್ರೀನ್ ಹೀರೋ ಆಫ್ ಇಂಡಿಯಾದ ಫಾರೆಸ್ಟ್ ಕ್ರಿಯೇಟರ್‌ನ ಸಹಸಂಸ್ಥಾಪಕ ಡಾ. ಆರ್. ಕೆ.ನಾಯರ್, ದ.ಕ. ಮತ್ತು ಉಡುಪಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಸವಣೂರು ಎಸ್.ಎನ್.ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್‌ನ ವಿಶ್ವಸ್ಥ ಎನ್. ಸುಂದರ ರೈ ನಡುಮನೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ವಿವಿಧ ತರಗತಿಗಳ ಪ್ರತಿಭಾವಂತ ಹತ್ತು ವಿದ್ಯಾರ್ಥಿಗಳಿಗೆ ತಲಾ ೫ ಸಾವಿರದಂತೆ ಶೀಂಟೂರು ಶಿಷ್ಯವೇತನವನ್ನು ನೀಡಲಿದ್ದೇವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.


ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಽಕಾರಿ ಅಶ್ವಿನ್ ಎಲ್. ಶೆಟ್ಟಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣ ಮೂರ್ತಿ ಕೆ., ವಿದ್ಯಾರಶ್ಮಿ ಸ್ವತಂತ್ರ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ, ಟ್ರಸ್ಟ್‌ನ ನಿರ್ದೇಶಕ ಸುಂದರ ರೈ ಉಪಸ್ಥಿತರಿದ್ದರು.

Share This Article

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…

ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…