ಗೃಹಸಚಿವರು ರಾಜೀನಾಮೆ ನೀಡಲಿ - ಕೊಳ್ನಾಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಸ್ಮಾ ಹಸೈನಾರ್ ಆಗ್ರಹ

Published on

ವಿಟ್ಲ: ಸರ್ಕಾರ ಅಹಿತಕರ ಘಟನೆ ತಡೆಯುವಲ್ಲಿ ಸಂಪೂರ್ಣವಿಫಲವಾಗಿದೆ. ಕಾಂಗ್ರೆಸ್ ಪಕ್ಷದ ಕೆಲಸ ಕಾರ್ಯಗಳಿಂದ ಹಿಂದೆ ಸರಿದು ತಟಸ್ಥರಾಗಲಿದ್ದೇವೆ. ವಿಧ್ವಂಸಕ ಕೃತ್ಯಗಳನ್ನು ತಡೆಯುವಲ್ಲಿ ವಿಫಲರಾದ ಗೃಹಸಚಿವರು ಹಾಗೂ ಉಸ್ತುವಾರಿ ಸಚಿವರು ನೈತಿಕಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೊಳ್ನಾಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಸ್ಮಾ ಹಸೈನಾರ್ ಹೇಳಿದರು.

ಕೊಳ್ನಾಡಿನಲ್ಲಿ ಹಿಂದು, ಮುಸ್ಲಿಂ, ಕ್ರೈಸ್ತರು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಿಕೊಂಡು ಬಂದಿದ್ದೇವೆ. ಧರ್ಮದ ಹೆಸರಿನಲ್ಲಿ ಅಮಾಯಕರನ್ನು ಕೊಲೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಂದ ಮನಸ್ಸಿಗೆ ಬೇಸರವುಂಟು ಮಾಡಿದೆ. ಕೃತ್ಯ ನಡೆಸುವ ಭಯೋತ್ಪಾದಕರನ್ನು, ಕುಮ್ಮಕ್ಕು ನೀಡುವ ಸಂಘಟನೆಯ ವ್ಯಕ್ತಿಗಳನ್ನು, ಬಾಡಿಗೆ ಭಾಷಣಕಾರರನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net