ಮಹಿಳೆಯರ ದೌರ್ಜನ್ಯದ ಬಗ್ಗೆ ಬಿಜೆಪಿ ಮೌನ - ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಆರೋಪ

Published on

ವಿಟ್ಲ: ಬಿಜೆಪಿ ಅಧಿಕಾರದಲ್ಲಿರುವ ಸಂಘ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಇದರ ಬಗ್ಗೆ ಚಕಾರ ಎತ್ತದ ಬಿಜೆಪಿ ಪದಾಧಿಕಾರಿಗಳು ಗಾಜಿನ ಮನೆಯಲ್ಲಿ ಕುಳಿತು ಕಲ್ಲೆಸೆಯುವ ಕಾರ್ಯ ಮಾಡುವುದನ್ನು ಬಿಟ್ಟು ಅವರ ಮನೆಯಲ್ಲಿ ನಡೆಯುತ್ತಿರುವುದನ್ನು ಸರಿಪಡಿಸುವ ಕೆಲಸ ಮಾಡಲಿ. ಪಂಚಾಯಿತಿ ಜನಪ್ರತಿನಿಽಗಳು ಪಕ್ಷಾತೀತವಾಗಿದ್ದು, ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಹಾಕಿರುವುದು ಖಂಡನೀಯ ಎಂದು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಹೇಳಿದರು.

ಮಾಣಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೬ ವರ್ಷದ ದಲಿತ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕಿರುಕುಳ ನೀಡಿದ ಬಗ್ಗೆ ಪೆರುವಾಯಿ ವ್ಯವಸಾಯ ಸಂಘ ನಿರ್ದೇಶಕ ಮಹೇಶ್ ಭಟ್ ಮೇಲೆ ೨೦೨೫ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಸಂದರ್ಭ ಬಿಜೆಪಿಯವರು ಎಲ್ಲಿಗೆ ಹೋಗಿದ್ದರು? ಈ ಬಗ್ಗೆ ಏನು ಕ್ರಮ ತೆಗೆದುಕೊಳ್ಳಲಾಗಿದೆ? ನಿರ್ದೇಶಕ ಸ್ಥಾನದಿಂದ ತೆರವು ಮಾಡುವ ಕಾರ್ಯಕ್ಕೆ ಯಾಕೆ ಮುಂದಾಗಿಲ್ಲ? ಆಗ ಬಿಜೆಪಿಗೆ ನೈತಿಕತೆ ಇರಲಿಲ್ವಾ? ಎಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಎಂ.ಎಸ್.ಮಹಮ್ಮದ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯದರ್ಶಿ ರಮಾನಾಥ ವಿಟ್ಲ, ವಲಯ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ರೈ ಪೆರುವಾಯಿ, ಮಾಣಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ ಬಾಳೆಕಲ್ಲು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net