More

    ತೈಲ ಬೆಲೆ ಏರಿಕೆ ಇಳಿಸಲು ಒತ್ತಾಯ

    ಧಾರವಾಡ: ತೈಲ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.

    ಇಲ್ಲಿನ ಆಲೂರು ವೆಂಕಟರಾವ್ ವೃತ್ತದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ದಿನೇದಿನೇ ಡೀಸೆಲ್, ಪೆಟ್ರೋಲ್ ಬೆಲೆ ಏರಿಸುತ್ತಿದೆ. ಇದರಿಂದ ದಿನ ಬಳಕೆ ವಸ್ತುಗಳ ಬೆಲೆಯೂ ಏರಿಕೆಯಾಗಿ ಜನರು ಪರದಾಡುವಂತಾಗಿದೆ. ಕೂಡಲೆ ತೈಲ ಬೆಲೆ ಇಳಿಕೆ ಮಾಡಬೇಕು ಎಂದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.

    ಸಮಿತಿ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ, ಜಂಟಿ ಕಾರ್ಯದರ್ಶಿ ಸೋಮ ಸುಂದರ, ಅರವಿಂದ ಕೆ.ಬಿ., ಇಂದ್ರಾ ಬಂಕಾಪುರ, ಸಂತೋಷ ಕರಗೂಳಿ, ಮಂಜುನಾಥ ಜಕ್ಕನ್ನವರ, ಸುಮಿತ್ರಾ ಹಳ್ಳಿಕೇರಿ, ಚಂದ್ರಶೇಖರ ಮಠದ, ರವಿ ಒಡೆಯರ, ಜಾಹೀರ ಅಡ್ವಾನಿ, ಚಂದ್ರಶೇಖರ ಜೇವರ್ಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts