More

    ಸಚಿವ ಬೈರತಿ ಸುರೇಶ್ ಅವರಿಂದ ಬಿಡುಗಡೆ ಆಯ್ತು ‘ಪ್ರೇತ’ ಆಡಿಯೋ!

    ಬೆಂಗಳೂರು: ಸಚಿವ ಬೈರತಿ ಸುರೇಶ್ ಅವರಿಂದ ಪ್ರೇತ ಆಡಿಯೋ ಬಿಡುಗಡೆಗೊಂಡಿದೆ. ಅರ್ಥಾತ್, ಸಚಿವರು ‘ಪ್ರೇತ’ ಚಿತ್ರದ ಆಡಿಯೋ ಲಾಂಚ್ ಮಾಡಿದ್ದಾರೆ. ಬೆಂಗಳೂರಿನ ಜೆ.ಸಿ.ನಗರದಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಸಚಿವರಾದ ಬೈರತಿ ಸುರೇಶ್ ತಮ್ಮದೇ ಕ್ಷೇತ್ರದ ಕಲಾವಿದ ನಟನೆ-ನಿರ್ದೇಶನದ ಹರೀಶ್ ರಾಜ್ ‘ಪ್ರೇತ’ ಸಿನಿಮಾದ ಆಡಿಯೋ ಲಾಂಚ್ ಮಾಡಿ ಶುಭ ಹಾರೈಸಿದ್ದಾರೆ.

    ‘ಪ್ರೇತ’ ಸಿನಿಮಾ ಮೂಲಕ ‘ಕಲಾಕರ್’ ಹರೀಶ್ ರಾಜ್ ಒಂದು ಗ್ಯಾಪ್ ಬಳಿಕ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಈವರೆಗೆ ‘ಕಲಾಕಾರ್’, ‘ಗನ್’, ‘ಶ್ರೀ ಸತ್ಯನಾರಾಯಣ’, ‘ಕಿಲಾಡಿ ಪೊಲೀಸ್’ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಹರೀಶ್ ರಾಜ್ 3 ವರ್ಷದ ಗ್ಯಾಪ್ ಬಳಿಕ ಮತ್ತೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರದ ಆಡಿಯೋ ಲಾಂಚ್ ಅದ್ಧೂರಿಯಾಗಿ ನೆರವೇರಿದ್ದು, ‘ಕಾಂತಾರ’ ಖ್ಯಾತಿಯ ನಟಿ ಸಪ್ತಮಿ ಗೌಡ ವಿಶೇಷ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.

    ಇದನ್ನೂ ಓದಿ: ಕಮಲ್​ ಹಾಸನ್ ‘ಇಂಡಿಯನ್​ 2’ಗೆ ಘಟಾನುಘಟಿಗಳ ಸಾಥ್​; ನಾಳೆ ಯಾರ್ಯಾರು ಜೊತೆಯಾಗುತ್ತಿದ್ದಾರೆ?

    ‘ಪ್ರೇತ’ ಸಿನಿಮಾದ ‘ದೂರದ ಊರಿಗೆ..’ ಎಂಬ ಹಾಡು ಎಚ್​ಆರ್​ಪಿ ಆಡಿಯೋ ಯೂಟ್ಯೂಬ್ ಚಾನೆಲ್​ನಲ್ಲಿ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯ ಬರೆದಿರುವ ಭಾವುಕ ಗೀತೆಗೆ ನವೀನ್ ಸಜ್ಜು ಧ್ವನಿಯಾಗಿದ್ದು, ಪ್ರವೀಣ್ ಶ್ರೀನಿವಾಸ್ ಮೂರ್ತಿ ರಾಗ ಸಂಯೋಜಿಸಿದ್ದಾರೆ. ಹರೀಶ್ ರಾಜ್ ಹಾಗೂ ಅಹಿರಾ ಶೆಟ್ಟಿ ಹಾಡಿನಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

    ಇದನ್ನೂ ಓದಿ: ಬಾಲಕನ ಹುಟ್ಟುಹಬ್ಬದ ಮುನ್ನಾದಿನವೇ ಸಂಸಾರ ಸರ್ವನಾಶ; ಸಮಾಧಿ ಮೇಲೆ ಬರ್ತ್​ಡೇ ಗಿಫ್ಟ್​​ಗಳನ್ನಿಟ್ಟ ಅಜ್ಜ-ಅಜ್ಜಿ!

    ಇದು ‘ಹರೀಶ್ ರಾಜ್ ಪ್ರೊಡಕ್ಷನ್’ನ ಐದನೇ ಸಿನಿಮಾ. ‘ಪ್ರೇತ’ ಚಿತ್ರದ ನಿರ್ಮಾಣ-ನಿರ್ದೇಶನದ ಜತೆಗೆ ನಾಯಕನಾಗಿಯೂ ಹರೀಶ್ ರಾಜ್ ಅಭಿನಯಿಸಿದ್ದಾರೆ. ಪ್ಯಾನ್ ಇಂಡಿಯಾ ಚಿತ್ರವಾಗಿರುವ ಇದು ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿಬರಲಿದೆ. ವಿರಾಜಪೇಟೆ ಮತ್ತು ಮಡಿಕೇರಿ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

    ಇದನ್ನೂ ಓದಿ: ಎಲೆಕ್ಟೋರಲ್ ಬಾಂಡ್ಸ್​: ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಮಹತ್ವದ ನಿರ್ದೇಶನ

    ಶೀರ್ಷಿಕೆಯೇ ಹೇಳುವಂತೆ ‘ಪ್ರೇತ’ ಒಂದು ಹಾರರ್ ಕಥೆಯುಳ್ಳ ಸಿನಿಮಾ. ಹರೀಶ್ ರಾಜ್ ಅವರೇ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ಹರೀಶ್ ರಾಜ್ ಜೊತೆ ಅಮೂಲ್ಯ ಭಾರದ್ವಾಜ್, ಅಹಿರಾ ಶೆಟ್ಟಿ, ಬಿ.ಎಂ. ವೆಂಕಟೇಶ್, ಅಮಿತ್ ಪಾತ್ರವರ್ಗದಲ್ಲಿ ಇದ್ದಾರೆ. ಕಿರಣ್ ಆರ್. ಹೆಮ್ಮಿಗೆ ಸಂಭಾಷಣೆ ಬರೆದಿದ್ದಾರೆ. ಶಿವಶಂಕರ್ ಛಾಯಾಗ್ರಹಣ ಮಾಡಿದ್ದಾರೆ. ಪ್ರವೀಣ್ ಶ್ರೀನಿವಾಸ್ ಮೂರ್ತಿ ಅವರ ಸಂಗೀತ ಈ ಚಿತ್ರಕ್ಕಿದೆ. ಜೀವನ್ ಪ್ರಕಾಶ್ ಅವರ ಸಂಕಲನ, ಮಂಜು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದ್ದು, ಈ ಸಿನಿಮಾದ ಎಲ್ಲ ಗೀತೆಗಳಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ.

    ಸಿಎಂ ಸಿದ್ದರಾಮಯ್ಯ ಹೇಳಿದ್ದು ಸುಳ್ಳು!; ಆ ಮಗುವಿನ ವಿಚಾರದಲ್ಲಿ ಮಧ್ಯಪ್ರವೇಶಿಸಿದ ರಾಜ್ಯ ಬಿಜೆಪಿ ಹೀಗಂದಿದ್ದೇಕೆ?

    ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts