More

    ಅಕ್ರಮ ಮರಳುಗಾರಿಕೆ ತಡೆಯದಿದ್ದರೆ ಕ್ರಮ

    ವಿಜಯವಾಣಿ ಸುದ್ದಿಜಾಲ ರೋಣ

    ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಸಂಬಂಧಿಸಿದ ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ನಿರೀಕ್ಷಕರ ಮೇಲೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಗದಗ ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಖಡಕ್ ಎಚ್ಚರಿಕೆ ನೀಡಿದರು.

    ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಸೋಮವಾರ ಅಕ್ರಮ ಮರಳುಗಾರಿಕೆ ತಡೆಗಟ್ಟುವ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಒಂದೇ ಪಾಸ್ ಪಡೆದು ಅದರಲ್ಲಿ ಮೂರ್ನಾಲ್ಕು ಬಾರಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಹೆಚ್ಚಿನ ದೂರುಗಳಿವೆ. ನದಿ ಪಾತ್ರದ ಹಳ್ಳ ಹಾಗೂ ರೈತರ ಕೆಲ ಜಮೀನಿನಲ್ಲಿ ಕಾನೂನು ಬಾಹಿರವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ ಎಂಬ ದೂರುಗಳೂ ಬಂದಿವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟಾಗುತ್ತಿದೆ. ಇನ್ನು ಮುಂದೆ ಈ ಬಗ್ಗೆ ಹೆಚ್ಚಿನ ನಿಗಾ ವಹಿಸಲಿದ್ದು, ಅಕ್ರಮ ಕಂಡುಬಂದರೆ ಮೊದಲು ಆ ವ್ಯಾಪ್ತಿಗೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡು ನಂತರ ಅಕ್ರಮದಲ್ಲಿ ತೊಡಗಿದವರ ಮೇಲೆ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸುತ್ತೇನೆ ಎಂದು ಎಚ್ಚರಿಸಿದರು.

    ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಮರಳು ಅಗೆಯುವುದು, ಯಂತ್ರಗಳ ಮೂಲಕ ಅಕ್ರಮವಾಗಿ ಮರಳು ಸಂಗ್ರಹಿಸುವುದು, ಬೋಟ್ ಅಳವಡಿಸಿರುವ ಬಗ್ಗೆ ಹಾಗೂ ಸಿಸಿ ಕ್ಯಾಮರಾ, ವೇ ಬ್ರಿಜ್ ವ್ಯವಸ್ಥೆ ಮಾಡದ ಕುರಿತು ದೂರುಗಳು ಬಂದಿವೆ. ಕೂಡಲೆ ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು ಎಂದು ಸೂಚಿಸಿದರು. ಸಿಪಿಐ ಸುನೀಲ ಸೌದಿ, ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts