ಕಿರುಕುಳ ನೀಡದೆ ತೆರಿಗೆ ಸೋರಿಕೆ ತಡೆಗಟ್ಟಿ: ಅಧಿಕಾರಿಗಳಿಗೆ ಸಿಎಂ ತಾಕೀತು

cm photo
Published on

ಬೆಂಗಳೂರು: ರಾಜ್ಯದಲ್ಲಿ ತೆರಿಗೆ ಸೋರಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕರೊನಾ ಲಾಕ್‌ಡೌನ್ ಬಳಿಕ ರಾಜ್ಯದಲ್ಲಿ ಈಗ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ಹೆಚ್ಚು ಕಿರುಕುಳ ನೀಡದೆ ಸಂಯಮದಿಂದ ವರ್ತಿಸುವಂತೆಯೂ ತಿಳಿಸಿದರು.

ನಕಲಿ ಇ-ವೇ ಬಿಲ್ ಗಳ ಬಳಕೆ, ಸರಕು ಸಾಗಾಣಿಕೆಗೆ ನೀಡುವ ಸಮಯಾವಕಾಶದ ದುರ್ಬಳಕೆ ಮುಂತಾದ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ತಾಕೀತು ಮಾಡಿದರು.

ಕೋವಿಡ್ 19ರ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಿಂದಾಗಿ ಸಹಜವಾಗಿ ತೆರಿಗೆ ಸಂಗ್ರಹ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿದೂಗಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್. ಶ್ರೀಕರ್ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net