More

  ಡೆಂೆ ಜ್ವರಕ್ಕೆ ಮುಂಜಾಗ್ರತೆಯೇ ಔಷಧ

  ಶ್ರೀರಂಗಪಟ್ಟಣ: ಸಮುದಾಯದೊಂದಿಗೆ ಸೇರಿ ಡೆಂೆ ಜ್ವರವನ್ನು ನಿಯಂತ್ರಿಸೋಣ ಎಂಬ ಘೋಷಣೆಯೊಂದಿಗೆ ರಾಷ್ಟ್ರೀಯ ಡೆಂೆ ದಿನ ಆಚರಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು ಎಂದು ತಾಲೂಕಿನ ಟಿ.ಎಂ.ಹೊಸೂರು ಪ್ರಾಥಮಿಕ ಚಿಕಿತ್ಸಾ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಟಿ.ಜೆ ತಾರಾ ತಿಳಿಸಿದರು.

  ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗುರುವಾರ ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ಟಿ. ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಡೆಂೆ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

  ನಿರ್ದಿಷ್ಟ ಚಿಕಿತ್ಸೆ ಇಲ್ಲದ ಮಾರಕ ರೋಗ ಡೆಂೆ ಜ್ವರಕ್ಕೆ ಮುಂಜಾಗ್ರತೆಯೇ ಪರಮೌಷಧಿ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದರು.
  ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಮಾತನಾಡಿ, ಹಗಲು ವೇಳೆ ಕಚ್ಚುವ ಸೋಂಕಿತ ಈಡೀಸ್ ಈಜಿಪ್ಟೈ ಸೊಳ್ಳೆಯೇ ಡೆಂೆ ಜ್ವರಕ್ಕೆ ಕಾರಣ. ಹಾಗಾಗಿ ಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಅಲ್ಲದೆ ಪ್ರಸ್ತುತ ಮಳೆ ಬರುತ್ತಿರುವುದರಿಂದ ಎಲ್ಲೆಡೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿ ಹೆಚ್ಚಾಗಿ ರೋಗ ಪ್ರಸರಣ ಕೂಡ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮನೆಯ ಒಳಗಿರುವ ಸಿಮೆಂಟ್ ತೊಟ್ಟಿ, ಡ್ರಮ್‌ಗಳನ್ನು ವಾರಕ್ಕೆ ಎರಡು ಬಾರಿ ತೊಳೆದು ನೀರು ತುಂಬಿದ ನಂತರ ಭದ್ರವಾಗಿ ಮುಚ್ಚಿಡಬೇಕು ಎಂದು ಸಲಹೆ ನೀಡಿದರು.

  ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ, ಆರೋಗ್ಯ ನೀರಿಕ್ಷಣಾಧಿಕಾರಿ ಎಂ.ಸಿ ಚಂದನ್, ಸಮುದಾಯ ಆರೋಗ್ಯಾಧಿಕಾರಿ ಮಲ್ಲಮ್ಮ ,ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಗೀತಾ, ಅಂಗನವಾಡಿ ಕಾರ್ಯಕರ್ತೆ ಸರೋಜಮ್ಮ, ಆಶಾ ಕಾರ್ಯಕರ್ತೆಯರಾದ ಲಕ್ಷ್ಮಮ್ಮ, ಸುಧಾಮಣಿ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts