More

    ಪರಿಸರ ರಕ್ಷಣೆಯಿಂದ ಸಾಂಕ್ರಾಮಿಕ ರೋಗಗಳ ತಡೆ

    ಕೋಲಾರ: ನಾವು ವಾಸವಿರುವ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಿಕೊಂಡಾಗ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎ.ವಿ.ನಾರಾಯಣಸ್ವಾಮಿ ತಿಳಿಸಿದರು.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ನಗರದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸೊಳ್ಳೆ ನಿಯಂತ್ರಣ ವಿಧಾನಗಳ ಮಾದರಿಗಳ ವಸ್ತು ಪ್ರದರ್ಶನದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
    ಮಲೇರಿಯಾ, ಡೆಂಘೆ, ಮೆದುಳು ಜ್ವರ ನಿಯಂತ್ರಣದಲ್ಲಿ ಶಾಲಾ ಮಕ್ಕಳು, ಸಮುದಾಯದ ಜವಾಬ್ದಾರಿಗೆ ಒತ್ತು ನೀಡಬೇಕು ಎಂಬುದು ಜಾಗೃತಿ ಚಟುವಟಿಕೆಯ ಪ್ರಮುಖ ಉದ್ದೇಶವಾಗಿದ್ದು, ಮಕ್ಕಳು ಗ್ರಾಮ, ಶಾಲೆ, ಮನೆಯಲ್ಲಿ ಸ್ವಚ್ಚತೆ, ಸೊಳ್ಳೆಗಳ ನಿಯಂತ್ರಣಕ್ಕೆ ಜಾಗೃತಿ ಮೂಡಿಸಬೇಕು ಎಂದರು.
    ಪ್ರತಿಯೊಬ್ಬರು ಜವಾಬ್ದಾರಿ ಅರಿತು ರೋಗದಿಂದ ದೂರವಿರಿ. ಮನೆಯಲ್ಲಿ ನೀರಿನ ತೊಟ್ಟಿಗಳು, ಡ್ರಮ್ ಮತ್ತು ಸಿಂಟೆಕ್ಸ್‌ಗಳನ್ನು ವಾರಕ್ಕೆ ಒಂದು ಬಾರಿ ಸ್ವಚ್ಛಗೊಳಿಸಬೇಕು. ಮನೆಯ ಸುತ್ತಮುತ್ತ ಎಸೆದಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
    ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್ ಮಾತನಾಡಿ, ಮನುಷ್ಯರಿಗೆ ಆರೋಗ್ಯ ಎಂಬುದು ಮುಖ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹೊಸ ರೋಗಗಳು ಪತ್ತೆಯಾಗುತ್ತಿದೆ. ಇದರಲ್ಲಿ ಡೆಂಘೆ, ಮಲೇರಿಯಾ, ಚಿಕೂನ್‌ಗುನ್ಯಾ ಮತ್ತಿತರ ಕಾಯಿಲೆಗಳ ಕುರಿತು ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts