More

    ಅತಿಕ್ರಮಿಸಿದರೆ ತಕ್ಕ ಪ್ರತ್ಯುತ್ತರ: ಚೀನಾವನ್ನು ಪರೋಕ್ಷವಾಗಿ ಎಚ್ಚರಿಸಿದ ರಾಷ್ಟ್ರಪತಿ

    ನವದೆಹಲಿ: ಸ್ವಾತಂತ್ರ್ಯೋತ್ಸವ ದಿನಾಚರಣೆ ಮುನ್ನಾದಿನ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಚೀನಾ ಹೆಸರು ಉಲ್ಲೇಖಿಸದೆಯೇ, ಅತಿಕ್ರಮಿಸಿದರೆ ತಕ್ಕ ಪ್ರತ್ಯುತ್ತರವನ್ನು ಭಾರತ ನೀಡಲಿದೆ ಎಂದು ಅವರು ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

    74ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ. ಈ ಅಭಿಯಾನ ಜಗತ್ತಿನಿಂದ ಭಾರತವನ್ನು ದೂರ ಮಾಡದೇ ಎಲ್ಲರೊಂದಿಗೆ ಬೆರೆತುಕೊಂಡು ಭಾರತವನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಯನ್ನಾಗಿಸುವ ಪ್ರಯತ್ನ. ಈ ಬಗ್ಗೆ ವಿದೇಶಿ ಹೂಡಿಕೆದಾರರಿಗೆ ಭೀತಿ ಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಇದನ್ನೂ ಓದಿ: ಸಿಆರ್​ಪಿಎಫ್​ ಅಧಿಕಾರಿಗೆ ಸಿಗ್ತಾ ಇರುವ ಏಳನೇ ಗ್ಯಾಲಂಟರಿ ಮೆಡಲ್ ಇದು…

    ಕೋವಿಡ್​ 19 ಸೋಂಕಿನ ವಿಚಾರ ಪ್ರಸ್ತಾಪಿಸಿದ ಅವರು, ಆರೋಗ್ಯ ಸೇವಾಕರ್ತರು ಈ ವಿಷಯದಲ್ಲಿ ಹೆಚ್ಚಿನ ನಿಗಾವಹಿಸಿ ಕೆಲಸ ಮಾಡುತ್ತಿದ್ದಾರೆ. ಶೀಘ್ರವೇ ಇದಕ್ಕೊಂದು ಪರಿಹಾರ ಸಿಗಲಿದೆ. ಜಗತ್ತೇ ಇದರಿಂದ ತಲ್ಲಣಗೊಂಡಿದ್ದು, ಸಾಕಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ. ಕೋವಿಡ್ ನಿಯಮಾನುಸಾರ ಮುಂಜಾಗ್ರತಾ ಕ್ರಮಗಳನ್ನು ಎಲ್ಲರೂ ಅನುಸರಿಸಬೇಕಾದ್ದು ಅನಿವಾರ್ಯ ಎಂದರು.

    ಇದನ್ನೂ ಓದಿ: ಗ್ಯಾಸ್ಟ್ರಿಕ್ ನಿಯಂತ್ರಣಕ್ಕೆ ಯೋಗಾಭ್ಯಾಸ

    ಚೀನಾದ ಹೆಸರನ್ನು ಉಲ್ಲೇಖಿಸದೆಯೇ, ನಮ್ಮ ನೆರೆಯವರು ಭೌಗೋಳಿಕ ವ್ಯಾಪ್ತಿ ಹೆಚ್ಚಿಸುವ ದುಸ್ಸಾಹಸಕ್ಕೆ ಕೈಹಾಕಿದ್ದರು. ಗಡಿ ಉಲ್ಲಂಘನೆ ಸಹಿಸದ ನಮ್ಮ ಯೋಧರ ಬಲಿದಾನವನ್ನು ನಾವು ಸ್ಮರಿಸಬೇಕು. ಅವರು ರಾಷ್ಟ್ರ ಗೌರವಕ್ಕೋಸ್ಕರ ಪ್ರಾಣವನ್ನು ಅರ್ಪಿಸಿದವರು. ಯಾರೇ ಆದರೂ ಅತಿಕ್ರಮಿಸಿದರೆ ಅದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತ ನೀಡಲಿದೆ ಎಂದು ಎಚ್ಚರಿಸಿದರು. (ಏಜೆನ್ಸೀಸ್)

    LIVE: ಸ್ವಾತಂತ್ರ್ಯೋತ್ಸವ ದಿನ ನಿಮಿತ್ತ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts