More

    ಬೆಲೆ ಏರಿಕೆಗೆ ಬೀಳಲಿ ಕಡಿವಾಣ: ಕೊಪ್ಪಳದಲ್ಲಿ ಎಸ್‌ಯುಸಿಐ ಜಿಲ್ಲಾ ಪದಾಧಿಕಾರಿಗಳ ಪ್ರತಿಭಟನೆ

    ಕೊಪ್ಪಳ: ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆಂದು ಆರೋಪಿಸಿ ಎಸ್‌ಯುಸಿಐ ಜಿಲ್ಲಾ ಪದಾಧಿಕಾರಿಗಳು ಶುಕ್ರವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ಗೃಹ ಬಳಕೆ ಅಡುಗೆ ಅನಿಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಪೆಟ್ರೋಲ್, ಡಿಸೇಲ್, ಅಡುಗೆ ಎಣ್ಣೆ ಬೆಲೆಯೂ ಗಗನಕ್ಕೇರಿದೆ. ಇದರಿಂದ ಬಡ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್‌ಡೌನ್‌ನಿಂದ ಉದ್ಯೋಗ ಕಳೆದುಕೊಂಡವರು ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದಾರೆ. ಇದರ ನಡುವೆ ಬೆಲೆ ಏರಿಕೆ ಬಿಸಿ ಅವರನ್ನು ಸುಡುತ್ತಿದೆ. ಮತ್ತೊಂದೆಡೆ ಸರ್ಕಾರ ಉದ್ಯೋಗ ಸೃಷ್ಟಿಸದ ಕಾರಣ ನಿರುದ್ಯೋಗಿಗಳ ಸಂಖ್ಯೆಯೂ ಅಧಿಕವಾಗುತ್ತಿದೆ ಎಂದು ಆರೋಪಿಸಿದರು.

    ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಸರ್ಕಾರಿ ಇಲಾಖೆಗಳಲ್ಲಿನ ಭ್ರಷ್ಟಾಚಾರ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಶಾಲಾ-ಕಾಲೇಜುಗಳನ್ನು ಬಲಪಡಿಸಿ, ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಉಳಿಸಬೇಕು. ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಎನ್‌ಇಪಿ ವಾಪಸ್ ಪಡೆಯಬೇಕು. ನರೇಗಾದಡಿ ಕೆಲಸದ ದಿನ ಹೆಚ್ಚಿಸಬೇಕು. ಕಾರ್ಪೋರೇಟ್ ಪರ ಕಾಯ್ದೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ಸಂಘಟನೆ ಮುಖಂಡರಾದ ಶರಣ ಉದ್ಬಾಳ, ಶರಣು ಗಡ್ಡಿ, ಸಿದ್ದಲಿಂಗರೆಡ್ಡಿ, ಶರಣು ಪಾಟೀಲ್, ರಮೇಶ ವಂಕಲಕುಂಟಾ, ಮಂಜುಳಾ, ಗಂಗರಾಜ ಅಳ್ಳಳ್ಳಿ, ರಾಘು ಚಾಕ್ರಿ, ಅಂಜಿನಪ್ಪ, ಅಕಮ್ಮ, ಲಲಿತಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts