More

    ಅರ್ಚಕರ ಸಮ್ಮುಖದಲ್ಲಿ ಧಾರ್ಮಿಕ ವಿಧಿ-ವಿಧಾನ

    ಉಗರಗೋಳ: ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ದವನದ ಹುಣ್ಣಿಮೆ ಅಂಗವಾಗಿ ಏ.7, 8ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ. ಆದರೆ, ಕರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಭಕ್ತರಿಗೆ ದೇವಸ್ಥಾನದ ಪ್ರವೇಶ ನಿಷೇಧಿಸಲಾಗಿದೆ. ಕೇವಲ ಅರ್ಚಕರು ಹಾಗೂ ಅಧಿಕಾರಿಗಳು, ಕೆಲ ಹಿರಿಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿ-ವಿಧಾನ ನೆರವೇರಲಿದೆ ಎಂದು ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಹೇಳಿದರು.

    ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏ.7ರಂದು ಸಂಜೆ ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ, ಕಂಕಣ ಮಂಗಲ ಧಾರಣೋತ್ಸವ, ಮಹಾ ಮಂಗಳಾರತಿ, 8ರಂದು ದೇವಿಗೆ ಅಭಿಷೇಕ, ವಿಶೇಷ ಅಲಂಕಾರ, ಪೂಜೆ, ಪಲ್ಲಕ್ಕಿ ಸೇವೆ ಹಾಗೂ 11 ಪರಡಿ ತುಂಬುವ ಕಾರ್ಯಕ್ರಮ ಜರುಗಲಿದೆ. ಲಾಕ್‌ಡೌನ್ ಜಾರಿಯಲ್ಲಿರುವ ಕಾರಣ ಭಕ್ತರು ಗುಡ್ಡದತ್ತ ಸುಳಿಯುತ್ತಿಲ್ಲ. ಹಾಗಾಗಿ, ಸ್ವಚ್ಛತಾ ಚಟುವಟಿಕೆ ಚುರುಕುಗೊಳಿಸಿದ್ದೇವೆ. ಕರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸೋಂಕು ನಿವಾರಕ ಔಷಧವನ್ನೂ ಸಿಂಪಡಿಸಲಾಗುತ್ತಿದೆ.

    ಯಲ್ಲಮ್ಮ ದೇವಿ ಈ ನಾಡಿನ ಶಕ್ತಿ ದೇವತೆ. ದೇವಿಯ ಮಂಗಳಸೂತ್ರ ಹರಿದಿದೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ ಹರಿಬಿಟ್ಟಿದ್ದು ಸರಿಯಲ್ಲ ಎಂದು ಅಧಿಕಾರಿ ಕೋಟಾರಗಸ್ತಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts