

ಬೈಂದೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೈಂದೂರು ವಲಯದ 2025ನೇ ಸಾಲಿನ ಮಹಾಸಭೆ ಹಾಗೂ ವಿವಿಧ ಸಾಂಸ್ಕೃತಿ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ಕೆ. ನಾಯ್ಕ ಉದ್ಘಾಟಿಸಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು. ಬೈಂದೂರು ವಲಯ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಜಯ್ ಕುಮಾರ್ ಶೆಟ್ಟಿ, ರತ್ತುಬಾಯಿ ಜನತಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಆನಂದ ಮುದ್ದೋಡಿ, ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್‌ನ ಉಪಾಧ್ಯಕ್ಷೆ ನಾಗರತ್ನಾ, ನಿರ್ದೇಶಕ ನಿತ್ಯಾನಂದ ಶೆಟ್ಟಿ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಜಯಾನಂದ ಪಟಗಾರ, ಸಂಘದ ನಿರ್ದೇಶಕ ರಾಘವೇಂದ್ರ ದೇವಾಡಿಗ, ನಿತ್ಯಾನಂದ ಎಂ., ರಾಘವೇಂದ್ರ ದಡ್ಡು, ಸಂಘದ ಜತೆ ಕಾರ್ಯದರ್ಶಿ ನಾಗರತ್ನ ಇದ್ದರು.
ಸುನಿಲ್‌ಕುಮಾರ್ ಶೆಟ್ಟಿ ಸ್ವಾಗತಿಸಿದರು. ಅಚ್ಯುತ ಬಿಲ್ಲವ ಆಯವ್ಯಯ ಮಂಡಿಸಿದರು. ಗಣೇಶ್ ಪೂಜಾರಿ ವಂದಿಸಿದರು. ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು. ಸುಬ್ರಹ್ಮಣ್ಯ ಜಿ.ಉಪ್ಪುಂದ ಸಹಕರಿಸಿದರು.