More

    ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಫೆ. 1ರ ಕೇಂದ್ರ ಬಜೆಟ್​ನಲ್ಲಿ ಎಷ್ಟು ಹಣ ಹೆಚ್ಚಾಗಲಿದೆ?

    ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2019 ರ ಅಂತಿಮ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈ ಯೋಜನೆಯಲ್ಲಿ ಸರ್ಕಾರವು ರೈತರಿಗೆ ವಾರ್ಷಿಕ 6,000 ರೂ.ಗಳನ್ನು ನೀಡುತ್ತಿದ್ದು, ಇದನ್ನು ಮೂರು ಸಮಾನ ಕಂತುಗಳಲ್ಲಿ ನೀಡಲಾಗುತ್ತದೆ. ಕಳೆದ ಐದು ವರ್ಷಗಳಲ್ಲಿ ಈ ಯೋಜನೆಯಲ್ಲಿ ನೀಡಲಾಗುವ ಹಣವನ್ನು ಹೆಚ್ಚಿಸಲಾಗಿಲ್ಲ.

    ಏಪ್ರಿಲ್- ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ಜರುಗಲಿವೆ. ಈ ಹಿನ್ನೆಲೆಯಲ್ಲಿ ರೈತರ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಕೇಂದ್ರದ ಬಿಜೆಪಿ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಹಣವನ್ನು ಹೆಚ್ಚು ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

    ಫೆ. 1ರಂದು ಮಂಡಿಸಲಾಗುವ ಮಧ್ಯಂತರ ಕೇಂದ್ರ ಬಜೆಟ್‌ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೊತ್ತವನ್ನು ಹೆಚ್ಚಿಸುವ ಘೋಷಣೆ ಮಾಡಬಹುದಾಗಿದೆ. ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಇದು ಈ ಸರ್ಕಾರದ ಅಂತಿಮ ಹಾಗೂ ಮಧ್ಯಂತರ ಬಜೆಟ್ ಆಗಲಿದೆ.

    ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಆ ಬಳಿಕ ಕೇಂದ್ರದಲ್ಲಿ ರಚನೆಯಾಗಲಿರುವ ಹೊಸ ಸರ್ಕಾರ ಸಂಪೂರ್ಣ ಬಜೆಟ್ ಮಂಡಿಸಲಿದೆ. ಸಾಮಾನ್ಯವಾಗಿ ಸರ್ಕಾರವು ಅಂತಿಮ ಬಜೆಟ್‌ನಲ್ಲಿ ದೊಡ್ಡ ಘೋಷಣೆಗಳನ್ನು ಮಾಡುವುದಿಲ್ಲ. ಆದರೆ, ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ಬಜೆಟ್‌ನಲ್ಲಿ ಕೆಲವು ದೊಡ್ಡ ಘೋಷಣೆಗಳನ್ನು ಮಾಡಬಹುದಾಗಿದೆ ಎಂದು ತಜ್ಞರು ಹೇಳಿದ್ದಾರೆ.

    ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಘೋಷಿಸಿರುವುದು ಗಮನಾರ್ಹವಾಗಿದೆ. ಹಿಂದಿನ ಸರ್ಕಾರದ ಅವಧಿಯ ಕೊನೆಯ ಬಜೆಟ್​ನಲ್ಲಿಯೇ ಈ ಯೋಜನೆಯನ್ನು ಘೋಷಿಸಲಾಗಿತ್ತು. ಅಂದು ಕೇಂದ್ರ ಸಚಿವರಾಗಿದ್ದ ಪಿಯೂಷ್ ಗೋಯಲ್ ಫೆಬ್ರವರಿ 1 ರಂದು ಅಂತಿಮ ಬಜೆಟ್ ಮಂಡಿಸಿದ್ದರು. ಇದರಲ್ಲಿ ರೈತರಿಗಾಗಿ ಈ ಯೋಜನೆಯನ್ನು ಘೋಷಿಸಿದ್ದರು. ತದನಂತರವೇ ಆಗ ಲೋಕಸಭೆ ಚುನಾವಣೆಗಳು ನಡೆದಿದ್ದವು.

    ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಸರ್ಕಾರವು ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುತ್ತದೆ. 2 ಹೆಕ್ಟೇರ್‌ವರೆಗಿನ ಜಮೀನು ಹೊಂದಿರುವ ರೈತರು ಈ ಯೋಜನೆಯ ವ್ಯಾಪ್ತಿಗೆ ಬರುತ್ತಾರೆ. ಅವರಿಗೆ ಈ ಯೋಜನೆಯಡಿ ಪ್ರತಿ ವರ್ಷ 6,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಈ ಹಣವನ್ನು ಮೂರು ಸಮಾನ ಕಂತುಗಳಲ್ಲಿ ನೀಡಲಾಗುತ್ತದೆ. ಈ ಯೋಜನೆ ಪ್ರಾರಂಭವಾದಾಗಿನಿಂದ, ಸರ್ಕಾರದ ಕೃಷಿ ಬಜೆಟ್‌ನ ಶೇಕಡಾ 50 ಕ್ಕಿಂತ ಹೆಚ್ಚು ಹಣ ಈ ಯೋಜನೆಗೆ ಖರ್ಚು ಮಾಡಲಾಗಿದೆ. ಮೊದಲ ವರ್ಷದಲ್ಲಿ ಈ ಯೋಜನೆಗೆ ಸರ್ಕಾರ 75,000 ಕೋಟಿ ರೂ. ವ್ಯಯಿಸಿತ್ತು.

    ಈಗ ಈ ಯೋಜನೆ ಘೋಷಿಸಿ 5 ವರ್ಷ ಕಳೆದಿರುವುದರಿಂದ ಹಾಗೂ ಈ ಅವಧಿಯಲ್ಲಿ ಹಣದುಬ್ಬರ (ಬೆಲೆ ಏರಿಕೆ) ಹೆಚ್ಚಿರುವುದರಿಂದ ಈ ಯೋಜನೆಯಲ್ಲಿನ ಮೊತ್ತವನ್ನು ಹೆಚ್ಚಿಸುವ ಸಾಧ್ಯತೆ ಅಧಿಕವಾಗಿದೆ ಎಂದು ತಜ್ಞರು ಹೇಳುತ್ತಾರೆ. ಚುನಾವಣೆ ಬಂದಿರುವುದರಿಂದ ಸಹಜವಾಗಿಯೇ ಈ ಪ್ರಮುಖ ಯೋಜನೆಯಲ್ಲಿನ ಮೊತ್ತ ಏರಿಕೆಯ ನಿರೀಕ್ಷೆ ಸಾಕಷ್ಟಿದೆ. ಆದರೆ, ಎಷ್ಟು ಮೊತ್ತ ಹೆಚ್ಚಳವಾಗಬಹುದು ಎಂಬುದು ಬಜೆಟ್​ ಮಂಡನೆಯಿಂದಲೇ ತಿಳಿಯಲಿದೆ.

    ಥಾರ್​ ಕಾರಿನಿಂದ ಗಾಡಿ ಎಳೆಯುವ ಬಿಟೆಕ್ ಪಾನಿ ಪುರಿವಾಲಿ: ಈಕೆ ಎಷ್ಟು ಮಳಿಗೆಯ ಒಡತಿ ಗೊತ್ತೆ?

    ಹೂಡಿಕೆಗೆ ಉತ್ತಮ ಮಾರ್ಗ ಮ್ಯೂಚುವಲ್ ಫಂಡ್‌: ನೀವು ಇದರಲ್ಲಿ ಎಷ್ಟು ಹಣ ತೊಡಗಿಸಬೇಕು?

    700 ಐಷಾರಾಮಿ ಕಾರು, 8 ಜೆಟ್ ವಿಮಾನ​, 4 ಸಾವಿರ ಕೋಟಿಯ ಅರಮನೆ: ಜಗತ್ತಿನ ಅತ್ಯಂತ ಶ್ರೀಮಂತ ಕುಟುಂಬದ ಬಳಿಯ ಸಂಪತ್ತೆಷ್ಟು ಗೊತ್ತೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts