More

    15 ನಿಮಿಷ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮನ; ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಪ್ರಯಾಣ

    ಮೈಸೂರು: ನೂತನವಾಗಿ ನಿರ್ಮಾಣವಾಗಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ಮೋದಿ ಇಂದು ಲೋಕಾರ್ಪಣೆಗೊಳಿಸಲಿದ್ದಾರೆ. ಸುಮಾರು 118 ಕಿ.ಮೀ ಉದ್ದದ ಮೈ-ಬೆಂ ದಶಪಥ ಹೆದ್ದಾರಿಯನ್ನು ಒಟ್ಟು 8,479 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಇದೀಗ ಪ್ರಧಾನಿ ಮೋದಿ ವಾಯಪಡೆಯ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

    ಇದನ್ನೂ ಓದಿ: ಮಂಡ್ಯಕ್ಕೆ ಭೇಟಿ ಕೊಟ್ಟ ಮೊದಲ ಪ್ರಧಾನಿ ನೆಹರು: ಮೋದಿ 4ನೇ ಪ್ರಧಾನಿ, ರಾಜಕೀಯವಾಗಿ 2ನೇ ಭೇಟಿ

    15 ನಿಮಿಷ ಮುಂಚಿತವಾಗಿ ಆಗಮಿಸಿದ ಪ್ರಧಾನಿ ಮೋದಿ, ಹೆಲಿಕಾಪ್ಟರ್ ಮೂಲ ಮಂಡ್ಯಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮಂಡ್ಯದ ಅಮರಾವತಿ ಹೋಟೇಲ್ ಬಳಿ ಹೆದ್ದಾರಿಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಮಂಡ್ಯಕ್ಕೆ ಬರುವ ಪ್ರಧಾನಿ ಮೋದಿ ಅವರನ್ನು ವಿವಿಧ ಕಲಾ ತಂಡಗಳು ಸ್ವಾಗತಿಸಲಿವೆ. ಮಧ್ಯಾಹ್ನ 11.40ಕ್ಕೆ ಹೆದ್ದಾರಿ ಲೋಕಾರ್ಪಣೆಗೊಳ್ಳಲಿದೆ. ಮಧ್ಯಾಹ್ನ 12.15 ರಿಂದ 1.15 ರವರೆಗೆ ವೇದಿಕೆ ಕಾರ್ಯಕ್ರಮ ಇರಲಿದೆ. ಮದ್ದೂರಿನ ಗೆಜ್ಜಲಗೆರೆ ಕಾಲನಿ ಬಳಿ ಅದ್ಧೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಅದಕ್ಕೂ ಮುನ್ನ ಮಂಡ್ಯ ನಗರದಲ್ಲಿ 1.8 ಕಿ.ಮೀ ರೋಡ್ ಶೋ ನಡೆಯಲಿದೆ.

    ಇದನ್ನೂ ಓದಿ: ಟೆನಿಸ್​ ತಾರೆ ಸಾನಿಯಾ ಮಿರ್ಜಾ ನಿವೃತ್ತಿ: ಪತ್ರ ಬರೆದು ಪ್ರಧಾನಿ ಮೋದಿ ಶುಭ ಹಾರೈಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts