ಕರ್ನಾಟಕದ ಮುಖ್ಯಮಂತ್ರಿಯನ್ನು ಕ್ಲರ್ಕ್​ನಂತೆ ನಡೆಸಿಕೊಳ್ಳುತ್ತಿದೆ ಕಾಂಗ್ರೆಸ್​: ಪ್ರಧಾನಿ ಮೋದಿ ವ್ಯಂಗ್ಯ

ನವದೆಹಲಿ: ಕಾಂಗ್ರೆಸ್​ನಿಂದ ಹಲವು ರೀತಿಯ ತೊಂದರೆಯಾಗುತ್ತಿದೆ. ಕರ್ನಾಟಕದಲ್ಲಿ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್​ ಮುಖ್ಯಮಂತ್ರಿಯನ್ನು ಕ್ಲರ್ಕ್​ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ರಾಮಲೀಲಾ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಮಾರೋಪದಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಆಗಲೇ ಮುಖ್ಯಮಂತ್ರಿಯನ್ನು ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್​ ನನಗೆ ತುಂಬ ತೊಂದರೆ ಕೊಟ್ಟಿದೆ. ಆ ಪಕ್ಷದ ನಾಯಕರಿಗೆ ನರೇಂದ್ರ ಮೋದಿಯೇ ಟಾರ್ಗೆಟ್​. ಆರ್ಥಿಕ ಸುಧಾರಣೆಗೆ ಏನೇ ವ್ಯವಸ್ಥೆ ತಂದರೂ ಅದನ್ನು ವಿರೋಧಿಸುತ್ತಾರೆ. ಅಭಿವೃದ್ಧಿ ವಿಚಾರದಲ್ಲಿ ದ್ವೇಷ ಸಾಧಿಸುವುದೇ ಕಾಂಗ್ರೆಸ್​ ಗುರಿ ಎಂದು ಆರೋಪಿಸಿದರು.

ದಿನಕ್ಕೆ 18 ಗಂಟೆ ಕೆಲಸ ಮಾಡುವ ಪ್ರಧಾನಿ ಬೇಕೋ, 2-3 ದಿನ ರಜಾ ತೆಗೆದುಕೊಳ್ಳುವ ವ್ಯಕ್ತಿ ಬೇಕೋ? ದೇಶಕ್ಕೆ ಎಂಥ ಸೇವಕ ಬೇಕು ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *