ವಯನಾಡ್: ಕೇರಳದ ವಯನಾಡು ಜಿಲ್ಲೆಯ ವಿಪತ್ತು ಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಪಾದಯಾತ್ರೆ: ನಾಳೆ ಒಂದು ಲಕ್ಷ ಕಾರ್ಯಕರ್ತರಿಂದ ಬೃಹತ್ ಸಮಾವೇಶ ಆಯೋಜನೆ
ಇಂದು ಬೆಳಗ್ಗೆ 11 ಗಂಟೆಗೆ ಮೋದಿ ಅವರ ವಿಶೇಷ ವಿಮಾನ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದು ಇಳಿಯಿತು. ಈ ವೇಳೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರು ಪ್ರಧಾನಿಯವರನ್ನು ಬರಮಾಡಿಕೊಂಡರು. ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಕೂಡ ಮೋದಿ ಜೊತೆಗಿದ್ದರು.
ಬಳಿಕ ಭೂಕುಸಿತ ಸಂಭವಿಸಿದ ವಯನಾಡಿನ ಮುಂಡಕೈ-ಚೂರಲ್‌ಮಲ-ಪುಂಚಿರಿಮಟ್ಟಂ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಯಿತು. ಹೆಲಿಕಾಪ್ಟರ್ನಲ್ಲಿ ಪ್ರಧಾನಮಂತ್ರಿಯವರೊಂದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಸಚಿವ ಸುರೇಶ್ ಗೋಪಿ ಮತ್ತಿತರರು ಉಪಸ್ಥಿತರಿದ್ದರು.
ನಂತರ ಮೋದಿ ಅವರು ಚೂರಲ್‌ಮಲದಲ್ಲಿ ಭೂ ಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಾಲ್ನಡಿಗೆ ಮೂಲಕ ಭೇಟಿ ನೀಡಿದರು.
ಮಧ್ಯಾಹ್ನ 2.30 ಸುಮಾರಿಗೆ ಮೇಪ್ಪಾಡಿಯ ನಿರಾಶ್ರಿತರ ಶಿಬಿರವೊಂದಕ್ಕೆ ಭೇಟಿ ನೀಡಿದ ಮೋದಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಈ ವೇಳೆ ದುಃಖಪತ್ತರಾದ ಸಂತ್ರಸ್ತರನ್ನು ಸಂತೈಸಿದರು.
ಜುಲೈ 30 ರಂದು ಸಂಭವಿಸಿದ್ದ ಭೂ ಕುಸಿತದಲ್ಲಿ 310 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 130 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಭೂ ಕುಸಿತ ಪೀಡಿತ ಪ್ರದೇಶಗಳಿಗೆ ಪ್ರಧಾನಿ ವಿಶೇಷ ಪರಿಹಾರ ನಿಧಿ ಘೋಷಿಸುವ ಸಾಧ್ಯತೆಯಿದೆ.
ಪಂಜಾಬ್-ಜಮ್ಮು ಗಡಿಯಲ್ಲಿ ಭಾರತೀಯ ಸೇನೆಯಿಂದ ಕಟ್ಟೆಚ್ಚರ, ಸಿ.ಸಿ.ಟಿ.ವಿ ನಿಯೋಜನೆ