ಮಹಾರಾಷ್ಟ್ರದಲ್ಲಿ 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಕುಸಿತ; ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ

Untitled-design-2024-08-26T184750.385
Published on

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕೋಟೆಯಲ್ಲಿದ್ದ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದಿದೆ. 2023 ಡಿಸೆಂಬರ್ 4ರಂದು ನೌಕಾಪಡೆಯ ದಿನದಂದು ಪ್ರಧಾನಿ ಮೋದಿ ಈ ಪ್ರತಿಮೆಯನ್ನು ಅನಾವರಣಗೊಳಿಸದರು.

ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ 35 ಅಡಿ ಎತ್ತರದ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕುಸಿದಿದೆ. ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗಾಳಿ ಸಮೇತ ಮಳೆಯಾಗುತ್ತಿದೆ. ಪೊಲೀಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ. ಪ್ರತಿಮೆ ಬೀಳಲು ಕಾರಣ ಏನೆಂಬುದನ್ನು ತಿಳಿಯಲು ತಜ್ಞರು ಪ್ರಯತ್ನಿಸುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರತಿಮೆ ಕುಸಿದಿರುವುದಕ್ಕೆ ಪ್ರತಿಪಕ್ಷಗಳು ಸರ್ಕಾರವನ್ನು ದೂಷಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ಡಿಸೆಂಬರ್​ 4ರಂದು ಈ ಸ್ಮಾರಕವನ್ನು ಉದ್ಘಾಟಿಸಿದರು. ಒಂದು ವರ್ಷ ಪೂರ್ಣಗೊಳ್ಳುವ ಮೊದಲೇ ಪ್ರತಿಮೆ ಕುಸಿದಿದೆ. ಈ ಪ್ರತಿಮೆಯ ಕಾಮಗಾರಿ ಕಳಪೆ ಗುಣಮಟ್ಟದ್ದಾಗಿದೆ ಎಂಬುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ ಬಿಜೆಪಿಯ ಭ್ರಷ್ಟ ಆಡಳಿತವು ಛತ್ರಪತಿ ಶಿವಾಜಿ ಮಹಾರಾಜರನ್ನು ಮತ್ತು ಮಹಾರಾಷ್ಟ್ರವನ್ನು ಅವಮಾನಿಸಿದೆ ಎಂದು ದೂಷಿಸುತ್ತಿರುವ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಘಟನೆಯ ಬಗ್ಗೆ ನನ್ನ ಬಳಿ ಸಂಪೂರ್ಣ ವಿವರಗಳಿಲ್ಲ. ಆದರೆ ಪಿಡಬ್ಲ್ಯೂಡಿ ಸಚಿವ ರವೀಂದ್ರ ಚವ್ಹಾಣ್, ಸಿಂಧುದುರ್ಗ ಜಿಲ್ಲೆಯ ಉಸ್ತುವಾರಿ ಸಚಿವರೂ ಸಹ ಈ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಕುಸಿದು ಬಿದ್ದ ಪ್ರತಿಮೆಯ ಜಾಗದಲ್ಲಿ ಹೊಸ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮಹಾರಾಷ್ಟ್ರ ಸಚಿವ ದೀಪಕ್ ಕೇಸರ್ಕರ್ ಭರವಸೆ ನೀಡಿದರು.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net