ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲಿರುವ ಪ್ರಧಾನಿ ಮೋದಿ

modi
Published on

ನವದೆಹಲಿ: ಮೂರನೇ ಹಂತದ ಲೋಕಸಭೆ ಚುನಾವಣೆಗೆ ಇನ್ನು ಮೂರು ದಿನ ಮಾತ್ರ ಬಾಕಿ ಉಳಿದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ, ಅಯೋಧ್ಯೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಅಯೋಧ್ಯೆಯ ಜೊತೆಗೆ, ಅವರು ಉತ್ತರ ಪ್ರದೇಶದ ಇಟಾವಾ ಮತ್ತು ಧೌರೆಹ್ರಾ ಪಟ್ಟಣಗಳಲ್ಲಿ ಚುನಾವಣಾ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿಯವರ ಭೇಟಿ ಹಿನ್ನೆಲೆಯಲ್ಲಿ ರಾಮ ಮಂದಿರವನ್ನು ಟ್ರಸ್ಟ್​ ವತಿಯಿಂದ ಬಗೆಬಗೆಯ ಹೂಗಳಿಂದ ಅಲಂಕರಿಸಲಾಗಿದೆ.

ಇದರ ನಡುವೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ತೆಲಂಗಾಣಕ್ಕೆ ತೆರಳಲಿದ್ದು, ಅಲ್ಲಿ ಚುನಾವಣಾ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮೇ 7ಕ್ಕೆ ಮೂರನೇ ಹಂತದ ಮತದಾನವು 10 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಒಟ್ಟು 94 ಕ್ಷೇತ್ರಗಳಲ್ಲಿ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net