ಪ್ರಧಾನಿ ನರೇಂದ್ರ ಮೋದಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ: ಸಿದ್ದರಾಮಯ್ಯ

ಕೊಪ್ಪಳ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅರಾಜಕತೆ ಸೃಷ್ಟಿ ಮಾಡುತ್ತಿದ್ದಾರೆ. ಅವರು ದುರುದ್ದೇಶದಿಂದ ಸಿಬಿಐ ಅನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ಧಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೊಪ್ಪಳ ಜಿಲ್ಲೆ ಕುಷ್ಟಗಿಯ ಹೆಲಿಪ್ಯಾಡ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪಶ್ಚಿಮ ಬಂಗಾಳದಲ್ಲಿ ಸಿಬಿಐ ಅನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಇದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ನಾನು ಬೆಂಬಲಿಸುತ್ತೇನೆ. ನಿಮ್ಮ ಮನೆ ಮೇಲೆ ಸುಮ್ಮಸುಮ್ಮನೆ ದಾಳಿ ಮಾಡಿದರೆ ನೀವು ಸುಮ್ಮನಿರುತ್ತೀರಾ ಎಂದು ಸಿದ್ದರಾಮಯ್ಯ ಮಾಧ್ಯಮದವರಿಗೆ ಮರು ಪ್ರಶ್ನೆ ಹಾಕಿದ್ದಾರೆ.

ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ಜಿಲ್ಲೆಯ ಮುಖಂಡರು ಒತ್ತಾಯಿಸುತ್ತಿದ್ಧಾರೆ. ಆದರೆ ಈವರೆಗೂ ಕಾಂಗ್ರೆಸ್​ ಮತ್ತು ಜೆಡಿಎಸ್​ ಕ್ಷೇತ್ರ ಹಂಚಿಕೆ ಕುರಿತು ತೀರ್ಮಾನ ತೆಗೆದುಕೊಂಡಿಲ್ಲ. ನಾನಂತೂ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕಾಂಗ್ರೆಸ್​ನ ಓರ್ವ ಶಾಸಕನಿಗೆ ಬಿಜೆಪಿ 50 ಕೋಟಿ ರೂ. ಆಫರ್​ ನೀಡುತ್ತಿದೆ. ಇಷ್ಟು ಹಣ ಎಲ್ಲಿಂದ ಬಂತು? ರೆಸಾರ್ಟ್​ನಲ್ಲಿ ಕೋಟಿ ಕೋಟಿ ರೂ. ಖರ್ಚು ಮಾಡಿದ್ದು ಯಾವ ಹಣ? ಬಿಜೆಪಿಯವರು ಸಾರ್ವಜನಿಕರ ಹಣ ಲೂಟಿ ಮಾಡಿದ್ದಾರೆ. ಕಾಂಗ್ರೆಸ್​ ಶಾಸಕರು ಯಾರೂ ಮಾರಾಟವಾಗುವುದಿಲ್ಲ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿ ಕಾರಿದರು.

One Reply to “ಪ್ರಧಾನಿ ನರೇಂದ್ರ ಮೋದಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ: ಸಿದ್ದರಾಮಯ್ಯ”

Comments are closed.