ಜನತೆ ಬಿಜೆಪಿ, ಪ್ರಧಾನಿ ಮೋದಿ ಅವರಿಗೆ ಜೈಕಾರ ಹಾಕಿದ್ದಾರೆ, ಮೈತ್ರಿಕೂಟಕ್ಕೆ ಹಿನ್ನೆಡೆಯಾಗಲಿದೆ: ಶ್ರೀರಾಮುಲು

ಬಳ್ಳಾರಿ: ಮತದಾನೋತ್ತರ ಸಮೀಕ್ಷೆ ಎನ್​ಡಿಎ ಪರವಾಗಿದೆ. ಪ್ರಧಾನಿ ಮೋದಿ ಪ್ರಾಮಾಣಿಕವಾಗಿ ಸರ್ಕಾರ ನಡೆಸಿದ್ದಾರೆ. ದೇಶದ ಜನತೆ ಬಿಜೆಪಿ, ಪ್ರಧಾನಿ ಮೋದಿ ಅವರಿಗೆ ಜೈಕಾರ ಹಾಕಿದ್ದಾರೆ. ಹೀಗಾಗಿ ಮೈತ್ರಿಕೂಟಕ್ಕೆ ಹಿನ್ನೆಡೆಯಾಗಲಿದೆ ಎಂದು ಶಾಸಕ ಶ್ರೀರಾಮುಲು ಹೇಳಿದರು.

ಬಳ್ಳಾರಿಯಲ್ಲಿ ಮತದಾನೋತ್ತರ ಸಮೀಕ್ಷೆ ಬದಲಾಗುತ್ತದೆ ಎಂಬ ವಿರೋಧ ಪಕ್ಷದವರ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್​ನಲ್ಲಿ ನಾಯಕತ್ವ ಇಲ್ಲ, ಸಮೀಕ್ಷೆ ನಿಜವಾಗುತ್ತದೆ. ಪ್ರಧಾನಿ ಮೋದಿಯವರೇ ಮತ್ತೆ ಪ್ರಧಾನಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕರಿಸಿದ ನಂತರ ಬಿ.ಎಸ್.​ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಬೇಕಿದೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಬೇಕು. ಮತಎಣಿಕೆಯ 24 ಗಂಟೆಯಲ್ಲಿ ರಾಜ್ಯದಲ್ಲಿ ಸರಕಾರ ಬೀಳಬೇಕು. ರಾಜ್ಯದಲ್ಲಿ ಮೈತ್ರಿ ಸರ್ಕಾರ ಜನರಿಗೆ ಬೇಡವಾಗಿದೆ. ರಾಜ್ಯ ಸರ್ಕಾರದಲ್ಲಿ ಆಂತರಿಕ ಕಿತ್ತಾಟ ಹೆಚ್ಚಾಗಿದೆ ಎಂದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *