More

    ರಾಜ್ಯದ ಮೊದಲ ಐಐಟಿ ಕ್ಯಾಂಪಸ್ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

    ಧಾರವಾಡ: ಪ್ರಧಾನಿ ನರೇಂದ್ರ ಮೋದಿ ರಿಬ್ಬನ್ ಕಟ್ ಮಾಡುವುದರ ಮೂಲಕ 470 ಎಕರೆಯಲ್ಲಿ 850 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ರಾಜ್ಯದ ಮೊದಲ ಐಐಟಿ ಕ್ಯಾಂಪಸ್​ನ್ನು ಲೋಕಾರ್ಪಣೆಗೊಳಿಸಿದ್ದಾರೆ. ಬಳಿಕ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ದೇಶದಲ್ಲೇ ಅತೀ ಉದ್ದದ ಪ್ಲಾಟ್ ಫಾರ್ಮ್ ಉದ್ಘಾಟಿಸಿದ್ದಾರೆ. ಅತ್ಯಾಧುನಿಕ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದಲ್ಲಿರುವ ಕೌಶಲ್ಯ ಅಂತರವನ್ನು ಹೆಚ್ಚಿಸುವಲ್ಲಿ ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿರುವ ಐಐಟಿ ಕ್ಯಾಂಪಸ್ ಸಹಕಾರಿಯಾಗಲಿದೆ.

    ಇದನ್ನೂ ಓದಿ: ಮಂಡ್ಯದಲ್ಲಿ ಪ್ರಧಾನಿ ಮೋದಿ ರೋಡ್‌ ಶೋ; ಕೇಸರಿಮಯವಾಗಿ ಬದಲಾದ ಸಕ್ಕರೆ ನಾಡು

    ಇದರೊಂದಿಗೆ ಹುಬ್ಬಳ್ಳಿ – ಧಾರವಾಡ ಸ್ಮಾರ್ಟ್ ಸಿಟಿ ಯೋಜನೆ, ಜಯದೇವ ಆಸ್ಪತ್ರೆ ನಿರ್ಮಾಣಕ್ಕೆ ಅಡಿಗಲ್ಲು, 1040 ಕೋಟಿ ರೂ. ವೆಚ್ಚದ ಬಹುಗ್ರಾಮ ನೀರು ಸರಬರಾಜು ಯೋಜನೆ, 150 ಕೋಟಿ ರೂ. ವೆಚ್ಚದ ತಪ್ಪರಿಹಳ್ಳ ಪ್ರವಾಹ ನಿಯಂತ್ರಣ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.

    ಧಾರವಾಡದ ಐಐಟಿ ಕ್ಯಾಂಪಸ್​ನಿಂದ ಸಾರ್ವಜನಿಕ ಸಮಾವೇಶದ ವೇದಿಕೆಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸನ್ಮಾನ ಮಾಡಿದರು. ಇದೇ ವೇಳೆ ಪ್ರಧಾನಿಗೆ ಸಿದ್ಧಾರೂಡ ಸ್ವಾಮೀಜಿಯ ಪ್ರತಿಮೆ ನೀಡಿ, ಕಸೂತಿ ಕಲೆಯ ಶಾಲು ಹೊದೆಸಿ ಗೌರವಿಸಲಾಯಿತು. 

    ಇದನ್ನೂ ಓದಿ: ಮೈ-ಬೆಂ ಹೆದ್ದಾರಿ ನಿರ್ಮಾಣದ ಕ್ರೆಡಿಟ್ ಪಾಲಿಟಿಕ್ಸ್ ವಿಚಾರ: ಜ್ಯೋತಿಷಿ ಕತೆ ಹೇಳಿ ಸುಮಲತಾ ತಿರುಗೇಟು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts