28.5 C
Bengaluru
Monday, January 20, 2020

PHOTOS: ಜನ್ಮದಿನದ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ; ಅಮ್ಮನೊಟ್ಟಿಗೆ ಕುಳಿತು ಊಟ ಮಾಡಿದ ಪ್ರೀತಿಯ ಪುತ್ರ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ನವದೆಹಲಿ: ಇಂದು 69ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಗುಜರಾತ್​ನ ಗಾಂಧಿನಗರದಲ್ಲಿರುವ ಮನೆಗೆ ತೆರಳಿ ತಾಯಿ ಹೀರಾಬೆನ್​(98) ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ನರೇಂದ್ರ ಮೋದಿಯವರು ಯಾವುದೇ ವಿಶೇಷ ಸಂದರ್ಭದಲ್ಲಿ ತಮ್ಮ ತಾಯಿಯನ್ನು ಭೇಟಿಯಾಗುತ್ತಾರೆ. ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆಯುತ್ತಾರೆ. ಕಳೆದ ಲೋಕಸಭಾ ಚುನಾವಣೆ ಪೂರ್ವ ನಾಮಪತ್ರ ಸಲ್ಲಿಸುವ ಮೊದಲು ಹಾಗೂ ಫಲಿತಾಂಶ ಬಂದ ಬಳಿಕವೂ ಗಾಂಧಿನಗರಕ್ಕೆ ತೆರಳಿ ತಾಯಿಯನ್ನು ಭೇಟಿಯಾಗಿದ್ದರು.

ಇಂದು ತಾಯಿ ಹೀರಾಬೆನ್​ ಅವರನ್ನು ಕಂಡು ಅವರ ಬಳಿ ಆಶೀರ್ವಾದ ಪಡೆದ ಮೋದಿಯವರು ಅವರೊಂದಿಗೆ ಕುಳಿತು ಊಟ ಮಾಡಿದ್ದಾರೆ. ತಾಯಿ-ಮಗ ಇಬ್ಬರೂ ಖುಷಿಯಿಂದ ಊಟ ಮಾಡುತ್ತಿರುವ ಫೋಟೋಗಳು ವೈರಲ್​ ಆಗಿವೆ. ಅದರಲ್ಲಿ ಗುಜರಾತ್​ನ ಪ್ರಮುಖ ಖಾದ್ಯಗಳಲ್ಲೊಂದಾದ ಗುಜರಾತಿ ಥಾಲಿಯನ್ನೂ ಕಾಣಬಹುದಾಗಿದೆ.

ತಾಯಿ ಹೀರಾಬೆನ್​ ಅವರನ್ನು ಭೇಟಿಯಾಗುವುದಕ್ಕೆ ಮೊದಲು ನರೇಂದ್ರ ಮೋದಿಯವರು ಕೆವಾಡಿಯಾದಲ್ಲಿರುವ ಸರ್ದಾರ್​ ಸರೋವರ್​ ಡ್ಯಾಂಗೆ ತೆರಳಿ ಅಲ್ಲಿ ನರ್ಮದಾ ಆರತಿ ಸಲ್ಲಿಸಿದರು. ಅಲ್ಲದೆ ಸರೋವರದ ಮಧ್ಯ ಇರುವ ಸರ್ದಾರ್​ ವಲ್ಲಭಭಾಯಿ ಪಟೇಲ್​ ಅವರ ಏಕತಾ ಮೂರ್ತಿಯ ಪ್ರತಿಮೆಯ ವಿಡಿಯೋವನ್ನು ತಮ್ಮ ಫೇಸ್​ಬುಕ್​ನಲ್ಲಿ ಶೇರ್​ ಮಾಡಿಕೊಂಡಿದ್ದರು.

ಖಲ್ವಾನಿ ಪರಿಸರ-ಪ್ರವಾಸೋದ್ಯಮ ತಾಣ ಮತ್ತು ಕೆವಾಡಿಯಾದ ಕಾಕ್ಟಸ್​ ಉದ್ಯಾನವನದಲ್ಲಿ ಕೆಲಸ ಸಮಯ ಕಳೆದರು. ಈ ವೇಳೆ ಗುಜರಾತ್​ ರಾಜ್ಯಪಾಲ ಆಚಾರ್ಯ ದೇವ್​ರಾತ್​ ಮತ್ತು ಮುಖ್ಯಮಂತ್ರಿ ವಿಜಯ್​ ರೂಪಾಣಿ ಇದ್ದರು.

ಮೋದಿ ಜನ್ಮದಿನದ ನಿಮಿತ್ತ ಸೆಪ್ಟೆಂಬರ್​ 14ರಿಂದ ದೇಶಾದ್ಯಂತ ಬಿಜೆಪಿ ನಾಯಕರು ಸೇವಾ ಸಪ್ತಾಹ್​ ಆಚರಣೆ ಮಾಡುತ್ತಿದ್ದು ವಿವಿಧ ಸೇವಾಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

 

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...