More

    VIDEO|ಪ್ರಧಾನಿ ಮೋದಿ ತುಮಕೂರು ಭೇಟಿ ವೇಳೆ ಪ್ರತಿಭಟನೆಗೆ ಮುಂದಾಗಿದ್ದ ರೈತರ ಬಂಧನ

    ತುಮಕೂರು: ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದ ರೈತರನ್ನು ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿದ್ದಾರೆ.

    ತುಮಕೂರು ಜಿಲ್ಲೆ ಎಲ್ಲ ತಾಲೂಕುಗಳ ರೈತ ಮುಖಂಡರು ಹಾಗೂ ರೈತರನ್ನು ಪೊಲೀಸರು ಬಂಧಿಸಿದ್ದಾರೆ.

    ಅಲ್ಲದೆ ಪ್ರತಿಭಟನೆ ನಡೆಸಲು ಅನ್ಯ ಜಿಲ್ಲೆಗಳಿಂದ ಆಗಮಿಸುವ ರೈತರ ಬಗ್ಗೆಯೂ ಪೊಲೀಸರು ಎಚ್ಚರ ವಹಿಸಿದ್ದಾರೆ.
    ಕೇಂದ್ರ ಸರ್ಕಾರದ ಕೆಲವು ನೀತಿಗಳು ರೈತರಿಗೆ ಮಾರಕವಾಗಿದ್ದು ಈ ನೀತಿಗಳನ್ನು ರೈತರು ವಿರೋಧಿಸುತ್ತಿದ್ದಾರೆ. ಪ್ರಧಾನಿ ಮೋದಿ ತುಮಕೂರಿನಲ್ಲಿ ಕಿಸಾನ್​ ಸಮ್ಮಾನ್​ ಯೋಜನೆಗೆ ಚಾಲನೆ ನೀಡಲು ಆಗಮಿಸುತ್ತಿದ್ದು, ಈ ವೇಳೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. (ದಿಗ್ವಿಜಯ ನ್ಯೂಸ್​)

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts