More

    ಪೆಟ್ರೋಲ್ ದರ 100 ರತ್ತ: ಪ್ರಧಾನಿ ಮೋದಿ ಏನಂದ್ರು ಗೊತ್ತಾ?

    ನವದೆಹಲಿ: ಪೆಟ್ರೋಲ್ ದರ ರು 100 ಗಡಿ ದಾಟುವ ಎಲ್ಲ ಲಕ್ಷಣ ಕಾಣುತ್ತಿದೆ. ಈಗಾಗಲೇ ರಾಜಸ್ತಾನದಲ್ಲಿ ದಾಟಿಯಾಗಿದೆ. ದೇಶದ ಬಹುತೇಕ ಕಡೆ ರು 92 ವರೆಗೆ ಪೆಟ್ರೋಲ್ ಮಾರಾಟವಾಗುತ್ತಿದೆ. ಡಿಸೇಲ್ ಬೆಲೆಯೂ ಏರುತ್ತಿದೆ, ಗ್ಯಾಸ ಬೆಲೆಯೂ ಏರುತ್ತಿದೆ.

    ಈ ಬಗ್ಗೆ ಬಹುತೇಕ ಜನಸಾಮಾನ್ಯರು ತಲೆ ಕೆಡಿಸಿಕೊಂಡಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ತುಟಿ ಪಿಟಕ್ ಎಂದಿರಲಿಲ್ಲ. ಇದೇ ಮೊದಲ ಬಾರಿಗೆ ಅವರು ಪರೋಕ್ಷವಾಗಿ ಇಂಧನ ಬೆಲೆ ಹೆಚ್ಚಳದ ಬಗ್ಗೆ ಮಾತನಾಡಿದ್ದಾರೆ. ಚೆನ್ನೈನಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ನಮ್ಮ ಹಿಂದಿನ ಸರ್ಕಾರಗಳು ಇಂಧನಗಳ ಆಮದಿನ ಮೇಲೆ ಅಷ್ಟೊಂದು ಪ್ರಮಾಣದಲ್ಲಿ ಅವಲಂಬನೆ ಆಗದೇ ಇದ್ದಿದ್ದರೆ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ.

    ಭಾರತ 2019-20 ನೇ ಸಾಲಿನಲ್ಲಿ ಶೇ 85 ರಷ್ಟು ಇಂಧನವನ್ನು ಪರದೇಶಗಳಿಂದ ಆಮದು ಮಾಡಿಕೊಂಡಿದೆ ಎಂದು ಮೋದಿ ಹೇಳಿದ್ದಾರೆ. ಅಗತ್ಯ ಇಂದನಗಳ ಬೆಲೆ ಹೆಚ್ಚಳ ನಿಜಕ್ಕೂ ತೀವ್ರ ಕಳವಳಕಾರಿಯಾಗಿದೆ. ಇದು ಮಧ್ಯಮ ವರ್ಗದವರಿಗೆ, ಬಡವರಿಗೆ ತೀವ್ರ ಹೊರೆಯಾಗುತ್ತದೆ. ಇಂಧನದ ಆಮದಿನ ಮೇಲೆ ನಾವು ಇಷ್ಟೊಂದು ಪ್ರಮಾಣದಲ್ಲಿ ಅವಲಂಬನೆ ಆಗಬೇಕಾ ಎಂದು ಪ್ರಶ್ನಿಸಿದ್ದಾರೆ.

    ಪರ್ಯಾಯ ಇಂಧನಗಳ ಮೇಲೆ ನಾವು ಕಣ್ಣು ಹಾಯಿಸಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಅನೇಕ ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ. ಪೆಟ್ರೋಲ್​ನಲ್ಲಿ ಇಥೇನಾಲ್ ಬಳಸುವ ಬಗ್ಗೆಯೂ ಚಿಂತನೆ ನಡೆದಿದೆ. 2030 ರ ವೇಳೆಗೆ ಶೇ 40 ರಷ್ಟು ಇಂಧನವನ್ನು ದೇಶಿಯವಾಗಿ ಉತ್ಪಾದಿಸಲಾಗುತ್ತದೆ ಎಂದಿದ್ದಾರೆ. ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಧನಗಳ ಬೆಲೆ ಏರಿಕೆ ಬಗ್ಗೆ ಮಾತನಾಡಿದ್ದು ದರ ಇಳಿಯಬಹುದಾ ಎನ್ನುವ ಆಶಾಭಾವನೆ ವ್ಯಕ್ತವಾಗಿದೆ.

    ಪಂಜಾಬ್: ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಮೋಘ ಸಾಧನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts