Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಟ್ರಾಫಿಕ್​ ಜಾಮ್​ ತಪ್ಪಿಸಲು ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ

Friday, 21.09.2018, 8:10 AM       No Comments

ನವದೆಹಲಿ: ಗಣ್ಯರ ವಾಹನಗಳು ಸಂಚರಿಸುವ ವೇಳೆ ಟ್ರಾಫಿಕ್​ ಜಾಮ್​ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗುವುದು ಸಾಮಾನ್ಯ. ಸದಾ ವಾಹನ ದಟ್ಟಣೆಯಿಂದ ಕೂಡಿರುವ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುತ್ತಾರೆ ಎಂದರೆ ಟ್ರಾಫಿಕ್​ ಸಮಸ್ಯೆ ಇನ್ನೂ ಹೆಚ್ಚುತ್ತದೆ. ಹಾಗಾಗಿ ಜನರಿಗೆ ಅನಾನುಕೂಲವಾಗುವುದನ್ನು ತಪ್ಪಿಸಲು ಮೋದಿ ಅವರು ಕಾರು ಬಿಟ್ಟು ಮೆಟ್ರೋದಲ್ಲಿ ಸಂಚರಿಸುವ ಮೂಲಕ ಸರಳತೆ ಮೆರೆದಿದ್ದಾರೆ.

ಮೋದಿ ಅವರು ಗುರುವಾರ ಇಂಡಿಯಾ ಇಂಟರ್​ನ್ಯಾಷನಲ್​ ಕನ್ವೆಂಷನ್​ ಮತ್ತು ಎಕ್ಸ್​ಪೋ ಸೆಂಟರ್​ನ ಶಂಕುಸ್ಥಾಪನೆ ಮಾಡುವ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೋದಿ ಅವರು ಧೌಲಾ ಕೌನ್​ ಮೆಟ್ರೋ ಸ್ಟೇಷನ್​ನಿಂದ ದ್ವಾರಕಾ ಸೆಕ್ಟರ್​ 21 ಮೆಟ್ರೋ ಸ್ಟೇಷನ್​ವರೆಗೆ ಏರ್​ಪೋರ್ಟ್​​ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ಕಾರ್ಯಕ್ರಮ ಮುಗಿದ ನಂತರ ಸಹ ಅವರು ಮೆಟ್ರೋದಲ್ಲೇ ವಾಪಸಾದರು.

ಮೋದಿ ಅವರು ಮೆಟ್ರೋದಲ್ಲಿ ಪ್ರಯಾಣಿಸುವ ವಿಷಯ ಪ್ರಯಾಣಿಕರಿಗೆ ತಿಳಿದಿರಲಿಲ್ಲ. ಮೋದಿ ಅವರು ಮೆಟ್ರೋ ಹತ್ತುತ್ತಿದ್ದಂತೆ ಪ್ರಯಾಣಿಕರು ಅಚ್ಚರಿಗೊಂಡರು. ಹಲವರು ಮೋದಿ ಅವರನ್ನು ಮಾತನಾಡಿಸಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್​ ಜೋ ಇನ್​ ಅವರು ಭಾರತಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸ್ಯಾಮ್ಸಂಗ್​ ಮೊಬೈಲ್​ ಉತ್ಪಾದನಾ ಘಟಕವನ್ನು ಉದ್ಘಾಟಿಸಲು ಅವರು ನೋಯಿಡಾಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದರು. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top