More

    ಪ್ರಜ್ವಲ್‌ ರೇವಣ್ಣ ಬಗ್ಗೆ ಸಹನೆ ತೋರಬೇಕಾಗಿಲ್ಲ: ಕಾಂಗ್ರೆಸ್‌ನ ನಡೆಯನ್ನು ಪ್ರಶ್ನಿಸಿದ ಪ್ರಧಾನಿ ಮೋದಿ

    ನವದೆಹಲಿ: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯ ಮಾತ್ರವಲ್ಲದೇ ದೇಶದಲ್ಲೂ ಬಹಳ ಸದ್ದು ಮಾಡುತ್ತಿದೆ. ಈಗ ಪ್ರಧಾನಿ ಮೋದಿ ಅವರು ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಪ್ರಜ್ವಲ್ ಅವರಂಥವರ ವಿಚಾರದಲ್ಲಿ ಸ್ವಲ್ಪವೂ ಸಹನೆ ತೋರಿಸಬೇಕಾದ ಅವಶ್ಯಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಆಸ್ಪತ್ರೆಗೆ ತೆರಳಿ ಎಸ್​.ಎಂ ಕೃಷ್ಣ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

    ಮೋದಿಗೆ ಸಂಬಂಧಿಸಿದಂತೆ, ಬಿಜೆಪಿಗೆ ಸಂಬಂಧಿಸಿದಂತೆ, ನಮ್ಮ ಸಂವಿಧಾನಕ್ಕೆ ಸಂಬಂಧಿಸಿದಂತೆ, ನನ್ನ ದೃಷ್ಟಿಕೋನ ಬಹಳ ಸ್ಪಷ್ಟವಾಗಿದೆ. ಇಂತಹ ವ್ಯಕ್ತಿಗಳ ವಿಚಾರದಲ್ಲಿ ಸ್ವಲ್ಪವೂ ಸಹನೆ ತೋರಿಸಬೇಕಿಲ್ಲ. ಕಾನೂನು ಅಡಿಯಲ್ಲಿ ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಬಳಸಿಕೊಂಡು ಕಠಿಣ ಕ್ರಮ ಶಿಕ್ಷೆಯನ್ನು ನೀಡಬೇಕು ಎಂದು ಮೋದಿ ಹೇಳಿದರು.

    ಪ್ರಜ್ವಲ್ ರೇವಣ್ಣ ಅವರಿಗೆ ದೇಶದಿಂದ ಹೊರಗಡೆ ಹೋಗಲು ಕರ್ನಾಟಕದಲ್ಲಿನ ಕಾಂಗ್ರೆಸ್​ ನೇತೃತ್ವದ ಸರ್ಕಾರ ಸಹಕರಿಸಿದೆ ಎಂದು ಮೋದಿ ಆರೋಪ ಮಾಡಿದರು. ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿರುವ ಕಾರಣ ಕ್ರಮ ಜರುಗಿಸುವ ಹೊಣೆಯು ರಾಜ್ಯ ಸರ್ಕಾರದ ಮೇಲೆ ಇದೆ ಎಂದು ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮೋದಿ ಹೇಳಿದ್ದಾರೆ.

    ಸಾವಿರಾರು ವಿಡಿಯೋಗಳು ಇವೆ ಎಂದಾದರೆ ಅವು ಜೆಡಿಎಸ್ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಅವಧಿಗೆ ಸೇರಿವೆ ಎಂಬುದು ಸ್ಪಷ್ಟವಾಗುತ್ತವೆ. ಅವರು ಅಧಿಕಾರದಲ್ಲಿದ್ದಾಗ ಈ ವಿಡಿಯೋಗಳನ್ನು ಸಂಗ್ರಹಿಸಿಕೊಂಡಿದ್ದರು. ಒಕ್ಕಲಿಗರು ತಮ್ಮ ಮತದಾನದ ಹಕ್ಕು ಚಲಾಯಿಸಿದ ನಂತರ ಚುನಾವಣೆ ಸಂದರ್ಭದಲ್ಲಿ ವಿಡಿಯೋಗಳನ್ನು ಬಿಡುಗಡೆ ಮಾಡಿದರು ಎಂದು ಮೋದಿ ಹೇಳಿದರು.

    ಪ್ರಜ್ವಲ್​ ರೇವಣ್ಣ ಅವರನ್ನು ದೇಶದಿಂದ ಹೊರಕ್ಕೆ ಕಳುಹಿಸಿದ ನಂತರ ಈ ವಿಡಿಯೋಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಧಾನಿ ಮೋದಿ, ಈ ಬೆಳವಣಿಗೆಗಳು ಅತ್ಯಂತ ಅನುಮಾನಾಸ್ಪದ ಎಂದರು. ರಾಜ್ಯ ಸರ್ಕಾರಕ್ಕೆ ಮಾಹಿತಿ ಇದ್ದಿದ್ದರೆ ನಿಗಾ ಇಡಬೇಕಿತ್ತು ಮತ್ತು ವಿಮಾನ ನಿಲ್ದಾಣದಲ್ಲಿ ನಿಗಾ ಇರಿಸಬೇಕಿತ್ತು ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ದೇಶದಲ್ಲಿ ಇಂತಹ ಆಟಗಳನ್ನು ಕೊನೆಗೊಳಿಸಬೇಕು: ನೀವು ಏನನ್ನೂ ಮಾಡಿಲ್ಲ, ಭಾರತ ಸರ್ಕಾರಕ್ಕೆ ಮಾಹಿತಿ ನೀಡಿಲ್ಲ. ಇದರರ್ಥ ಇದು ರಾಜಕೀಯ ಆಟ ಎಂಬುದು ಸ್ಪಷ್ಟವಾಗಿದೆ. ಆದರೆ, ಇದು ನನ್ನ ವಿಷಯವಲ್ಲ. ಯಾವುದೇ ಅಪರಾಧಿಯನ್ನು ಬಿಡಬಾರದು. ನಮ್ಮ, ದೇಶದಲ್ಲಿ ಇಂತಹ ಆಟಗಳನ್ನು ಕೊನೆಗೊಳಿಸಬೇಕು ಎಂದು ಅವರು ಹೇಳಿದರು. ಮೋದಿಗೆ ಸಂಬಂಧಿಸಿದಂತೆ, ಬಿಜೆಪಿಗೆ ಸಂಬಂಧಿಸಿದಂತೆ, ನಮ್ಮ ಸಂವಿಧಾನಕ್ಕೆ ಸಂಬಂಧಿಸಿದಂತೆ, ನನ್ನ ದೃಷ್ಟಿಕೋನ ಬಹಳ ಸ್ಪಷ್ಟವಾಗಿದೆ. ಇಂತಹ ವ್ಯಕ್ತಿಗಳ ವಿಚಾರದಲ್ಲಿ ಸ್ವಲ್ಪವೂ ಸಹನೆ ತೋರಿಸಬೇಕಿಲ್ಲ. ಕಾನೂನು ಅಡಿಯಲ್ಲಿ ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಬಳಸಿಕೊಂಡು ಕಠಿಣ ಕ್ರಮ ಶಿಕ್ಷೆಯನ್ನು ನೀಡಬೇಕು ಎಂದು ಮೋದಿ ಹೇಳಿದರು. ಸಂಸದ ಪ್ರಜ್ವಲ್​ ಅವರನ್ನು ದೇಶಕ್ಕೆ ವಾಪಸ್​ ಕರೆತರಬೇಕು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.

    ಆಸ್ಪತ್ರೆಗೆ ತೆರಳಿ ಎಸ್​.ಎಂ ಕೃಷ್ಣ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts