More

    ಕರೊನಾ ವಿರುದ್ಧ ಹೋರಾಡುತ್ತಿರುವವರ ಆರೋಗ್ಯಕ್ಕಾಗಿ ದೇವಿಯಲ್ಲಿ ಪ್ರಾರ್ಥಿಸುತ್ತೇನೆ: ಪ್ರಧಾನಿ ನರೇಂದ್ರ ಮೋದಿ

    ನವದೆಹಲಿ: ಹಿಂದುಗಳ ಹೊಸವರ್ಷ ಯುಗಾದಿಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಶುಭಾಶಯ ಕೋರಿದ್ದಾರೆ. ಈ ಯುಗಾದಿಯನ್ನು ದೇಶದ ವಿವಿಧ ಭಾಗಗಳಲ್ಲಿ ಬೇರೆಬೇರೆ ಹೆಸರುಗಳಿಂದ ಆಚರಿಸಲಾಗುತ್ತದೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ಗುಡಿ ಪಡ್ವಾ, ನವ್ರೇಹ್​, ಸಜಿಬು, ಚಿರೋಬಾ ಮತ್ತಿತರ ಹೆಸರುಗಳಿಂದ ಹೊಸವರ್ಷವನ್ನು ಬರಮಾಡಿಕೊಳ್ಳಲಾಗುತ್ತದೆ.

    ವೈರಸ್ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮಾ.24ರ ರಾತ್ರಿ 12ಗಂಟೆಯಿಂದಲೇ ಇಡೀ ಭಾರತ ಲಾಕ್​​ಡೌನ್​ ಆಗಿದೆ. ಹಾಗಾಗಿ ಪ್ರತಿವರ್ಷದಷ್ಟು ಸಂಭ್ರಮದಿಂದ ಯುಗಾದಿ ಆಚರಣೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್​ ಮೂಲಕ ದೇಶದ ಎಲ್ಲರಿಗೂ ಯುಗಾದಿ ಶುಭಾಶಯ ಕೋರಿದ್ದಾರೆ. 

     
    ದೇಶದಾದ್ಯಂತ ವಿವಿಧ ಹಬ್ಬಗಳನ್ನು ಆಚರಿಸಲಾಗುತ್ತಿದೆ. ಸಾಂಪ್ರದಾಯಿಕವಾಗಿ ಹೊಸವರ್ಷ ಪ್ರಾರಂಭವಾಗಿದೆ. ಈ ಹಬ್ಬಗಳು ದೇಶದ ಎಲ್ಲ ಜನರಿಗೆ ಆರೋಗ್ಯ, ಸಂತೋಷ, ಸಂಪತ್ತನ್ನು ನೀಡಲಿ ಎಂದು ಮೋದಿ ಹೇಳಿದ್ದಾರೆ.

    ಇಂದಿನಿಂದ ನವರಾತ್ರಿ ಪ್ರಾರಂಭವಾಗಿದೆ. ಮಾರಕ ಕಾಯಿಲೆ ಕರೊನಾ ವಿರುದ್ಧ ಹೋರಾಡುತ್ತ ರೋಗಿಗಳಿಗೆ ನಿರಂತರವಾಗಿ ಚಿಕಿತ್ಸೆ ನೀಡುತ್ತಿರುವ ವೈದ್ಯರು, ನರ್ಸ್​​ಗಳು, ನಾಗರಿಕರ ಸುರಕ್ಷತೆಗಾಗಿ ಶ್ರಮಿಸುತ್ತಿರುವ ಪೊಲೀಸರು, ಮಾಧ್ಯಮ ಸಿಬ್ಬಂದಿಗಳ ಆರೋಗ್ಯಕ್ಕಾಗಿ, ಯಶಸ್ಸಿಗಾಗಿ ನಾನು ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

    ಆಯಾ ರಾಜ್ಯಗಳಲ್ಲಿ ಯಾವ ಹೆಸರಿನಿಂದ ಆಚರಿಸುತ್ತಾರೋ ಅದೇ ಹೆಸರನ್ನು ಉಲ್ಲೇಖಿಸಿ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿಯವರು, ಕರ್ನಾಟಕದ ಜನರಿಗೆ ಕನ್ನಡದಲ್ಲಿಯೇ ಯುಗಾದಿಯ ಶುಭಾಶಯ ತಿಳಿಸಿದ್ದಾರೆ.

    ಯುಗಾದಿ ಹೊಸವರ್ಷ ಬಂದಿದೆ. ಈ ವರ್ಷ ಆಕಾಂಕ್ಷೆಗಳೆಲ್ಲ ಈಡೇರಲಿ. ವಿಪತ್ತುಗಳಿಂದ ಹೊರಬರಲು ಹೊಸ ಚೈತನ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪ್ರತಿಯೊಬ್ಬರಿಗೂ ಸಂತಸ ಮತ್ತು ಅದಕ್ಕಿಂತ ಮಿಗಿಲಾಗಿ ಉತ್ತಮ ಆರೋಗ್ಯವನ್ನು ನೀಡಿ ದೇವರು ಆಶೀರ್ವಾದ ಮಾಡಲಿ ಎಂದು ಮೋದಿ ಟ್ವೀಟ್​ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts