ಬೆಳಗಾವಿಯಲ್ಲಿ ಪ್ರಧಾನಿ ರೋಡ್ ಶೋ ಹಿನ್ನೆಲೆ; 10 ಕ್ವಿಂಟಾಲ್ ಹೂ ಸಿದ್ಧಗೊಳಿಸಿದ ಕಾರ್ಯಕರ್ತರು

BJP
Published on

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ 10 ಕಿ.ಮೀ ಭರ್ಜರಿ ರೋಡ್​ ಶೋನಲ್ಲಿ ಭಾಗವಹಿಸುತ್ತಿದ್ದಾರೆ. ರೋಡ್​ ಶೋ ವೇಳೆ ಸಾದಿಯುದ್ದಕ್ಕೂ ಲಕ್ಷಾಂತರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಲಿದ್ದಾರೆ. ಇದೀಗ ಪ್ರಧಾನಿಯನ್ನು ಸ್ವಾಗತಿಸಲು ಕಾರ್ಯಕರ್ತರು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. 10 ಕ್ವಿಂಟಾಲ್ ಹೂವನ್ನು ಸಿದ್ದಗೊಳಿಸಿದ್ದಾರೆ.

ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ನಿನ್ನೆ ರಾತ್ರಿಯಿಂದ ಸಿದ್ದತೆ ಕಾರ್ಯ ನಡೆಯುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ಕೈಜೋಡಿಸಿದ್ದಾರೆ.

ಕುಂದಾನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಹೀಗಾಗಿ ಲಕ್ಷಾಂತರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಬಗೆಬಗೆಯ ಖಾದ್ಯಗಳು ತಯಾರಾಗುತ್ತಿವೆ. ನಾಲ್ಕು ಕಡೆ ಊಟ ಹಾಗೂ ಉಪಹಾರದ ವ್ಯವಸ್ಥೆಯಿದ್ದು, ಬೆಳಗಿನ ಉಪಹಾರಕ್ಕೆ ಉಪ್ಪಿಟ್ಟು, ಮಧ್ಯಾಹ್ನದ ಊಟಕ್ಕೆ ಹಾಲು ಹುಗ್ಗಿ, ಬದನೆಕಾಯಿ ಪಲ್ಯ ಹಾಗೂ ಅನ್ನ ಸಾಂಬರ್ ವ್ಯವಸ್ಥೆ ಮಾಡಲಾಗಿದೆ. ನಾಲ್ಕೂ ಪ್ರದೇಶಗಳಲ್ಲಿ ಬೃಹತ್ ಪಾರ್ಕಿಂಗ್ ಹಾಗೂ ಊಟದ ವ್ಯವಸ್ಥೆ ಇದ್ದು, ಪ್ರತಿಯೊಂದು ಸ್ಥಳದಲ್ಲಿ 35 ಸಾವಿರ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net