ಸಿನಿಮಾ

‘ದಿ ಕೇರಳ ಸ್ಟೋರಿ’ ಸಿನಿಮಾ ನೋಡುವಂತೆ ನೋಟಿಸ್ ನೀಡಿದ ಪ್ರಿನ್ಸಿಪಾಲ್!

ಬಾಗಲಕೋಟೆ: ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡುವಂತೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ನೋಟಿಸ್ ನೀಡಿರುವ ಘಟನೆ ಇಳಕಲ್ ನಗರದಲ್ಲಿ ನಡೆದಿದೆ. ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಸಿನಿಮಾದ ಅದೊಂದು ದೃಶ್ಯದ ಬಗ್ಗೆ ಅಜ್ಜಿಯ ಪ್ರತಿಕ್ರಿಯೆಗೆ ಹೆದರುತ್ತಿದ್ದೆ: ಅದಾ ಶರ್ಮಾ

ಇಳಕಲ್ ವಿಜಯಮಹಾಂತೇಶ್ ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಡಾ.ಕೆ.ಸಿ. ದಾಸ್ ‘ದಿ ಕೇರಳ ಸ್ಟೋರಿ’ ನೋಡುವಂತೆ ಸೂಚನೆ ನೀಡಿದ್ದಾರೆ. ನಗರದ ಶ್ರೀನಿವಾಸ ಚಿತ್ರಮಂದಿರದಲ್ಲಿ ಉಚಿತ ಪ್ರದರ್ಶನ ಇದೆ. ಹೀಗಾಗಿ ಬಿಎಎಮ್​ಎಸ್​ನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಮೊದಲ ವರ್ಷದ ಪಿಜಿ ವಿದ್ಯಾರ್ಥಿಗಳು ಸಿನಿಮಾ ನೋಡುವಂತೆ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ಇಂದಿನಿಂದ ಮೂರು ದಿನಗಳ ಕಾಲ ‘ದಿ ಕೇರಳ ಸ್ಟೋರಿ’ ಸಿನಿಮಾದ ಉಚಿತ ಪ್ರದರ್ಶನಕ್ಕೆ ಚಂದನ ಚಿತ್ರಮಂದಿರದಲ್ಲಿ ವ್ಯವಸ್ಥೆ ಮಾಡಿದ್ದಾರೆ. ಎಲ್ಲ ಹಿಂದುಗಳು, ವಿದ್ಯಾರ್ಥಿಗಳು, ಬಿಜೆಪಿ ಕಾರ್ಯಕರ್ತರು ಸಿನಿಮಾ ನೋಡುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನ ನೀಡದಿರುವುದು ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ: ರಾಹುಲ್ ಗಾಂಧಿ

‘ದಿ ಕೇರಳ ಸ್ಟೋರಿ’ ಸಿನಿಮಾ ಸಾಕಷ್ಟು ವಿವಾದಗಳ ಹೊರತಾಗಿ ಗಲ್ಲಾ ಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರ ಕಳೆದರೂ ಸಿನಿಮಾದ ಬೇಡಿಕೆ ಕಡಿಯಾಗಿಲ್ಲ. ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಈವರೆಗೆ 200 ಕೋಟಿ ರೂಪಾಯಿಗೂ ಅಧಿಕ ಮೊತ್ತ ಗಳಿಸಿದೆ. ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ನಿಂದ ಮಹಿಳೆಯರನ್ನು ಹೇಗೆ ಬಲವಂತವಾಗಿ ಮತಾಂತರಿಸಲಾಗುತ್ತದೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ.

Latest Posts

ಲೈಫ್‌ಸ್ಟೈಲ್