More

    VIDEO| ತರಗತಿ ವೇಳೆ ನಮಾಜ್​ ಮಾಡಿದ ವಿದ್ಯಾರ್ಥಿಗಳು; ಪ್ರಾಂಶುಪಾಲರು ಅಮಾನತು

    ಲಖನೌ: ತರಗತಿ ನಡೆಯುತ್ತಿದ್ದ ವೇಳೆ ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್​ ಮಾಡಿದ ಕಾರಣಕ್ಕೆ ಪ್ರಾಂಶುಪಾಲರನ್ನು ಅಮಾನತು ಮಾಡಿರುವ ಘಟನೆ ಉತ್ತರಪ್ರದೇಶದ ಲಖನೌ ನಗರದಲ್ಲಿರುವ ಠಾಕೂರ್​ಗಂಜ್​ ಎಂಬ ಪ್ರದೇಶದಲ್ಲಿ ನಡೆದಿದೆ.

    ವಿದ್ಯಾರ್ಥಿಗಳು ನಮಾಜ್​ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಿಂದೂಪರ ಸಂಘಟನೆಗಳ ಸದಸ್ಯರು ಅನುಮತಿ ಕೊಟ್ಟ ಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡುವಂತೆ ಪ್ರತಿಭಟನೆ ನಡೆಸಿ ಆಗ್ರಹಿಸಿವೆ.

    ಇದನ್ನೂ ಓದಿ: ಸಿಎಂ ಜಗನ್​ ಮೋಹನ್​ ರೆಡ್ಡಿ ಒಬ್ಬ ಸೈಕೋ, ರಾವಣನಂತೆ ಅವನನ್ನು ಸುಡಬೇಕು: ನಾರಾ ಲೋಕೇಶ್

    ಈ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣಾಧಿಕಾರಿ ಅರುಣ್​ ಕುಮಾರ್, ಠಾಕೂರ್​ಗಂಜ್​ನ ನೇಪಿಯರ್ ರಸ್ತೆಯಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಕೆಲ ಅಪರಿಚಿತ ವ್ಯಕ್ತಿಗಳು ಬೋಧನಾ ಕಾರ್ಯ ಹೊರತುಪಡಿಸಿ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಕೆಲವು ಮಕ್ಕಳು ಶುಕ್ರವಾರ ನಮಾಜ್ ಮಾಡಿದ್ದು ಇಲಾಖೆಯ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ.

    ತನಿಖಾ ವರದಿಯ ಆಧಾರದ ಮೇಲೆ, ಶಾಲಾ ಪ್ರಾಂಶುಪಾಲೆ ಮೀರಾ ಯಾದವ್ ಅವರನ್ನು ಉತ್ತರ ಪ್ರದೇಶ ಸರ್ಕಾರಿ ನೌಕರ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು-1999 ರ ಅಡಿಯಲ್ಲಿ ಶನಿವಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಶಿಕ್ಷಕಿಯರಾದ ತೆಹಝೀನ್ ಫಾತಿಮಾ ಮತ್ತು ಮಮತಾ ಮಿಶ್ರಾ ಅವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಶಿಕ್ಷಣಾಧಿಕಾರಿ ಅರುಣ್​ ಕುಮಾರ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts